
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕರ ಸಮಸ್ಯೆಗಳನ್ನು ಈಡೇರಿಸುವುದಾಗಿ ವಾರ್ತಾ ಸಚಿವ ರೋಷನ್ ಬೇಗ್ ಅವರ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆದು ಶೀಘದಲ್ಲೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವ ರೋಷನ್ ಬೇಗ್ ನಿರ್ಮಾಪಕರ ಮನವೊಲಿಸಿದ್ದು, ನಿರ್ಮಾಪಕರು ಉಪವಾಸ ಸತ್ಯಾಗ್ರಹ ಹಿಂಪಡೆದಿದ್ದಾರೆ.
ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿದ ರೋಷನ್ ಬೇಗ್ ಕಲಾವಿದರು ಹಾಗೂ ನಿರ್ಮಾಪಕರ ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಶೀಘ್ರದಲ್ಲೇ ಈ ಸಮಸ್ಯೆ ಪರಿಹರಿಸಲು ಸರ್ಕಾರ ಮಧ್ಯೆ ಪ್ರವೇಶಿಸಿ ಸಮಸ್ಯೆಗೆ ಸೂಕ್ತ ಪರಿಹಾರ ದೊರಕಿಸುವುದಾಗಿ ನೀಡಿ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ತಾತ್ಕಾಲಿಕವಾಗಿ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಈ ವೇಳೆ ವಾಟಾಳ್ ನಾಗರಾಜ್, ಬಾಮಾ ಹರೀಶ್, ಸಾರಾ ಗೋವಿಂದ್, ಎಸ್ ನಾರಾಯಣ್ ಮೊದಲಾದವರು ಇದ್ದರು.
Advertisement