

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್‍ಗೆ ಸಂಬಂಧಿಸಿದಂತೆ ಸಂಸದ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೆ ಮೂರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಇದರಿಂದ ಅವರ ವಿರುದ್ಧ ಇದುವರೆಗೆ ಲೋಕಾಯುಕ್ತದಲ್ಲಿ 10 ಎಫ್ಐಆರ್ ದಾಖಲಾದಂತಾಗಿದೆ.
ಏನಿದು ದೂರು?
ಅರ್ಕಾವತಿ ಲೇಔಟ್ ನ ರಾಚೇನಹಳ್ಳಿಯಲ್ಲಿ ಎರಡು ಎಕರೆ ಪ್ರದೇಶ ಹಾಗೂ ಬನಶಂಕರಿ 5ನೇ ಹಂತದಲ್ಲಿ ಸರ್ವೆ ನಂ.104/2, 104/3 ಸೇರಿದಂತೆ 2 ಎಕರೆ 36 ಗುಂಟೆ, ಜ್ಞಾನಭಾರತಿ ಲೇಔಟ್ ನವರೆಗೆರಹಳ್ಳಿಯಲ್ಲಿ ನಾಲ್ಕು ಎಕರೆ ಜಮೀನನ್ನು ಅಕ್ರಮ ಡಿನೋಟಿಫಿಕೇಷನ್ ಮಾಡಲಾಗಿದೆ ಎಂಬ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಸಿಐಡಿಗೆ ವರದಿ: ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ವೇಳೆ ವಿವಿಧ ಕಾರಣಗಳಿಗಾಗಿ ಡಿನೋಟಿಫಿಕೇಶನ್ ಮಾಡಿದ್ದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಲಾಗಿದೆ ಎಂಬುದು 2012ರಲ್ಲಿ ಸಿಎಜಿ ವರದಿಯಲ್ಲಿ ಬಹಿರಂಗಗೊಂಡಿತ್ತು. ಈ ವರದಿ ಆಧರಿಸಿದ ಜಯಕುಮಾರ್ ಹಿರೇಮಠ್ ಅವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಅವರ ಅರ್ಜಿ ಪರಿಶೀಲಿಸಿದ ಹೈ ಕೋರ್ಟ್, ಈ ಸಂಬಂಧ ಲೋಕಾಯುಕ್ತ ಪೊಲೀಸರ ಬಳಿ ದೂರು ಸಲ್ಲಿಸುವಂತೆ ಸೂಚಿಸಿತ್ತು.