ಲಲಿತ್ ಮೋದಿ ತನ್ನ ರಕ್ಷಣೆಗೆ ರಾಜಕಾರಣಿಗಳ ಬಳಕೆ: ಸದಾನಂದಗೌಡ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ರಾಜಕಾರಣಿಗಳನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ...
ಡಿ.ವಿ.ಸದಾನಂದಗೌಡ
ಡಿ.ವಿ.ಸದಾನಂದಗೌಡ
Updated on: 

ನವದೆಹಲಿ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ರಾಜಕಾರಣಿಗಳನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ಅವರು ಶುಕ್ರವಾರ ಹೇಳಿದ್ದಾರೆ.

'ಪ್ರಕರಣ ಬೆಳಕಿಗೆ ಬಂದ ದಿನದಿಂದಲೂ ಲಿಲಿತ್ ಮೋದಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಮತ್ತು ತನ್ನ ಮೇಲಿನ ಕಳಂಕವನ್ನು ಆಡಳಿತ ಪಕ್ಷದ ಹಾಗೂ ಪ್ರತಿಪಕ್ಷದ ನಾಯಕರಿಗೆ ವರ್ಗಾಯಿಸುತ್ತಿದ್ದಾರೆ' ಎಂದು ಹೇಳಿದ್ದಾರೆ.

'ಆತ ತುಂಬಾ ಬುದ್ಧಿವಂತ. ಇಡೀ ದೇಶಕ್ಕೆ ಮೋಸ ಮಾಡಿ ಈಗ ಲಂಡನ್‌ನಲ್ಲಿ ಕುಳಿತುಕೊಂಡ, ಕಾನೂನಿನಿಂದ ತಪ್ಪಿಸಿಕೊಳ್ಳಲು ಈ ಎಲ್ಲಾ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾನೆ' ಎಂದು ಸದಾನಂದಗೌಡ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com