ಭ್ರಷ್ಟಾಚಾರದಲ್ಲಿ ನನ್ನ ಕುಟುಂಬದವರಿಲ್ಲ: ಲೋಕಾಯುಕ್ತರಿಂದ ಸ್ಪಷ್ಟನೆ

ಲೋಕಾಯುಕ್ತ ಸಂಸ್ಥೆಯೊಳಗೆ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪದಲ್ಲಿ ನಮ್ಮ ಕುಟುಂಬವಾಗಲಿ, ನೆಂಟರಾಗಲಿ ಇಲ್ಲ' ಎಂದು ಲೋಕಾಯುಕ್ತ...
ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್
ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್

ಬೆಂಗಳೂರು: `ಲೋಕಾಯುಕ್ತ ಸಂಸ್ಥೆಯೊಳಗೆ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪದಲ್ಲಿ ನಮ್ಮ ಕುಟುಂಬವಾಗಲಿ, ನೆಂಟರಾಗಲಿ ಇಲ್ಲ' ಎಂದು ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ.

ಲೋಕಾಯುಕ್ತ ಕಚೇರಿಯೋಳಗೆ ಭ್ರಷ್ಟಾಚಾರ ಆರೋಪದಲ್ಲಿ ನಿಮ್ಮ ಕುಟುಂಬದವರು ಭಾಗಿಯಾಗಿದ್ದಾರೆ ಎಂದು ಆರೋಪವಿದೆಯಲ್ಲ? ಎಂದು ಸುದ್ದಿಗಾರರು ಲೋಕಾಯುಕ್ತ
ಕಚೇರಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಕುಟುಂಬದವರು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಕೃಷ್ಣರಾವ್‍ಗೆ ಶೋಧ: ಲೋಕೋಪಯೋಗಿ ಇಲಾಖೆಯ ಜಿಲ್ಲಾ ಪಂಚಾಯತ್ ಎಂಜಿನಿಯರ್ ಕೃಷ್ಣಮೂರ್ತಿ ಅವರು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಹೆಸರು ಹೇಳಿಕೊಂಡು
ರು.1 ಕೋಟಿ ಲಂಚ ಕೇಳಿದ್ದಾರೆ ಎನ್ನಲಾದ ಪ್ರಕರಣದ ತನಿಖೆ ನಡೆಯುತ್ತಿದೆ. ಶಂಕಿತ ಆರೋಪಿ ಕೃಷ್ಣರಾವ್ ಎಂಬಾತನಿಗಾಗಿ ಹುಡುಕಾಟ ನಡೆದಿದೆ. ಆತನ ಪತ್ತೆ ನಂತರವೇ ಹೆಚ್ಚಿನ ಮಾಹಿತಿ
ಲಭ್ಯವಾಗುತ್ತಿದೆ. ಸದ್ಯ ಯಾರನ್ನು ಬಂಧಿಸಿಲ್ಲ ಎಂದು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ತಿಳಿಸಿದರು.

ತಮ್ಮ ಹೆಸರು ಹೇಳಿಕೊಂಡು ಎಂಜಿನಿಯರ್ ಗೆ ಲಂಚ ಕೇಳಿರುವ ಆರೋಪ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಎಸ್ಪಿ ಸೋನಿಯಾ ನಾರಂಗ್ ಅವರಿಗೆ ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ ಅಡಿ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿರುವ ಅಧಿಕಾರಿಗಳು ಕೃಷ್ಣಮೂರ್ತಿ ನೀಡಿರುವ ಫೋನ್ ನಂಬರ್ ಗೆ ಸಂಬಂಧಿಸಿದ ಕರೆಗಳ ಮಾಹಿತಿ ಪಡೆದು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಲೋಕಾಯುಕ್ತ ಕಚೇರಿಯ ಸಿಸಿ ಕ್ಯಾಮರಾ ವಿಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಲೋಕಾಯುಕ್ತ ಸಂಸ್ಥೆಯೊಳಗೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಆದೇಶ ಹೊರಡಿಸಲು ಹಿಂದೇಟು ಹಾಕಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಅವರು ತೀವ್ರ ಮುಜುಗರಕ್ಕೀಡಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com