ಇಂಡೋನೇಷ್ಯಾ: ಜನವಸತಿ ಪ್ರದೇಶದಲ್ಲಿ ವಿಮಾನ ಪತನ; 30 ಮಂದಿ ಸಾವು

ತಾಂತ್ರಿಕ ಸಮಸ್ಯೆಯಿಂದ ಮಿಲಿಟರಿ ವಿಮಾನವೊಂದು ಪತನಗೊಂಡ ಪರಿಣಾಮ 30 ಮಂದಿ ಮೃತಪಟ್ಟಿರುವ ಘಟನೆ ಇಂಡೋನೇಷ್ಯಾದ ಸುಮಾತ್ರ...
ಇಂಡೋನೇಷ್ಯಾದ ಸುಮಾತ್ರ ದ್ವೀಪದ ಸಮೀಪ ಜನವಸತಿ ಪ್ರದೇಶದಲ್ಲಿ ಪತನಗೊಂಡ ವಿಮಾನ
ಇಂಡೋನೇಷ್ಯಾದ ಸುಮಾತ್ರ ದ್ವೀಪದ ಸಮೀಪ ಜನವಸತಿ ಪ್ರದೇಶದಲ್ಲಿ ಪತನಗೊಂಡ ವಿಮಾನ
Updated on: 

ಜಕಾರ್ತ: ತಾಂತ್ರಿಕ ಸಮಸ್ಯೆಯಿಂದ ಮಿಲಿಟರಿ  ವಿಮಾನವೊಂದು ಪತನಗೊಂಡ ಪರಿಣಾಮ 30 ಮಂದಿ ಮೃತಪಟ್ಟಿರುವ ಘಟನೆ ಇಂಡೋನೇಷ್ಯಾದ ಸುಮಾತ್ರ ದ್ವೀಪದ ಸಮೀಪ ಜನವಸತಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಇದೊಂದು ಸರಕು ಸಾಗಣೆ ವಿಮಾನವಾಗಿದ್ದು, ಇದರಲ್ಲಿ ಪ್ರಯಾಣಿಸುತ್ತಿದ್ದ 12 ಸಿಬ್ಬಂದಿ ಸೇರಿದಂತೆ 18 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆಎಂದು ಇಂಡೋನೇಷ್ಯಾದ ವಾಯುಪಡೆಯ ಮುಖ್ಯಸ್ಥ ಆಗಸ್‌ ಸುಪ್ರಿಂತಾ ಖಾಸಗಿ ತಿಳಿಸಿದ್ದಾರೆ.

ವಿಮಾನ ಪತನಗೊಳ್ಳುವ ಕೆಲವೇ ಕ್ಷಣಗಳ ಮುಂಚೆ ಪೈಲಟ್‌, ನಿಲ್ದಾಣದಲ್ಲಿನ ನಿಯಂತ್ರಣ ಕೊಠಡಿಗೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇದೆ ಎನ್ನುವ ತುರ್ತು ಸಂದೇಶ ಕಳುಹಿಸಿದ್ದರು. ಸಾವಿನ ಸಂಖ್ಯೆ ಇನ್ನೂ ನಿಖರಾವಿಗ ತಿಳಿದುಬಂದಿಲ್ಲ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com