ತ.ನಾಡು ಉಪ ಚುನಾವಣೆ: ಒಂದೂವರೆ ಲಕ್ಷ ಮತಗಳಿಂದ ಭರ್ಜರಿ 'ಜಯಾ'

ಆರ್.ಕೆ.ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಹೊರ ಬಿದ್ದಿದ್ದು, ನಿರೀಕ್ಷೆಯಂತೆ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಬರೋಬ್ಬರಿ ಒಂದೂವರೆ...
ಜಯಲಲಿತಾ
ಜಯಲಲಿತಾ

ಚೆನ್ನೈ: ಆರ್.ಕೆ.ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಹೊರ ಬಿದ್ದಿದ್ದು, ನಿರೀಕ್ಷೆಯಂತೆ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಬರೋಬ್ಬರಿ ಒಂದೂವರೆ ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ.

ಚೆನ್ನೈನ ರಾಣಿ ಮೇರಿ ಕಾಲೇಜ್‌ನಲ್ಲಿ ಇಂದು ಬೆಳಗ್ಗೆಯಿಂದ ನಡೆಯುತ್ತಿದ್ದ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಜಯಲಲಿತಾ ಅವರು 1,60, 921 ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿ ಸಿಪಿಎಂನ ಅಭ್ಯರ್ಥಿ ಸಿ.ಮಹೇಂದ್ರನ್ ಅವರು ಕೇವಲ 9,690 ಮತಗಳನ್ನು ಪಡೆದು ಹೀನಾಯ ಸೋಲು ಅನುಭವಿಸಿದ್ದಾರೆ.

ತಮಿಳುನಾಡು ರಾಜ್ಯಪಾಲ ಕೆ.ರೋಸಯ್ಯ ಅವರು ಭರ್ಜರಿ ಗೆಲುವು ಸಾಧಿಸಿರುವ ಜಯಲಲಿತಾ ಅವರನ್ನು ಅಭಿನಂದಿಸಿದ್ದಾರೆ. ಇನ್ನು ಜಯಲಲಿತಾ ಅವರು ಸಹ ತನ್ನನ್ನು ಗೆಲ್ಲಿಸಿದ ಆರ್.ಕೆ.ನಗರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಧನ್ಯವಾದ ಹೇಳಿದ್ದಾರೆ.

ತಮಿಳುನಾಡಿನಾದ್ಯಂತ ಎಐಎಡಿಎಂಕೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ಜಯಲಲಿತಾ ಅವರು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಶೇಷ ಕೋರ್ಟ್‌ನಿಂದ ನಾಲ್ಕು ವರ್ಷ ಜೈಲು ಶಿಕ್ಷೆ ಗುರಿಯಾಗಿದ್ದರಿಂದ ಅವರ ಸದಸ್ಯತ್ವ ರದ್ದುಗೊಂಡಿತ್ತು. ಬಳಿಕ ಹೈಕೋರ್ಟ್ ಕ್ಲೀನ್‌ಚಿಟ್ ಪಡೆದ ಜಯಾ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದೀಗ ಉಪ ಚುನಾವಣೆ ಮೂಲಕ ಎಐಎಡಿಎಂಕೆ ಮುಖ್ಯಸ್ಥೆ ತಮಿಳುನಾಡು ವಿಧಾನಸಭೆಗೆ ಮರು ಆಯ್ಕೆಯಾಗಿದ್ದಾರೆ. ಆರ್.ಕೆ. ನಗರ ವಿಧಾನಸಭೆಗೆ ಕಳೆದ ಜೂನ್ 27ರಂದು ಉಪ ಚುನಾವಣೆ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com