ಕರ್ನಾಟಕ-ಮಹಾರಾಷ್ಟ್ರಗಡಿ ವಿವಾದ: ಸಮಿತಿ ಪುನರ್ರಚಿಸಿದ ಮಹಾ ಸರ್ಕಾರ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ಈ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ಪುನರ್ ರಚಿಸಿರುವುದಾಗಿ ಹೇಳಿದೆ.
ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್

ಮುಂಬೈ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ಈ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ಪುನರ್ ರಚಿಸಿರುವುದಾಗಿ ಹೇಳಿದೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದ ಎಂಟು ಸದಸ್ಯರ ಸಮತಿಯನ್ನು ಪುನರ್ ರಚಿಸಲಾಗಿದ್ದು, ಎನ್‌ಸಿಪಿ ಹಿರಿಯ ನಾಯಕ ಶರದ್ ಪವಾರ್ ಹಾಗೂ ಬಿಜೆಪಿ, ಶಿವಸೇನೆಯ ಹಿರಿಯ ಸಚಿವರು ಈ ಸಮಿತಿಯಲ್ಲಿದ್ದಾರೆ.

ಈ ಸಂಬಂಧ ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮಾಡಿರುವ ಗೊತ್ತುವಳಿ ಪ್ರಕಾರ, ಮಹಾರಾಷ್ಟ್ರ ವಿಧಾನಸಭೆ ಪ್ರತಿಪಕ್ಷದ ನಾಯಕರೂ ಸಮಿತಿಯ ಭಾಗವಾಗಿರಲಿದ್ದಾರೆ ಎಂದು ಹೇಳಿದೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ತುಂಬಾ ಹಳೆಯ ವಿವಾದವಾಗಿದ್ದು, ಕರ್ನಾಟಕದ ಬೆಳಗಾವಿ ಹಾಗೂ ಇತರೆ ಕೆಲವು ಗಡಿ ಭಾಗಗಳು ತನಗೆ ಸೇರಿದ್ದೆಂದು ಮಹಾರಾಷ್ಟ್ರ ಮೊದಲನಿಂದಲೂ ವಾದಿಸುತ್ತಾ ಬಂದಿದೆ. ಸದ್ಯ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದು, ವಿಚಾರಣೆ ಹಂತದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com