ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಸ್ಪೀಕರ್ ನಿಧನ

ಜಿ. ಕಾರ್ತಿಕೆಯನ್
ಜಿ. ಕಾರ್ತಿಕೆಯನ್

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇರಳ ಸ್ಪೀಕರ್ ಜಿ. ಕಾರ್ತಿಕೆಯನ್ ಅವರು ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.

ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 66 ವರ್ಷದ ಕಾರ್ತಿಕೆಯನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 9.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕಾರ್ತಿಕೆಯನ್ ಅವರು ಇಬ್ಬರು ಪುತ್ರರನ್ನು ಮತ್ತು ಪತ್ನಿಯನ್ನು ಅಗಲಿದ್ದಾರೆ.

ಕೇರಳ ಸ್ಪೀಕರ್ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು, ಕಾರ್ತಿಕೆಯನ್ ಅವರ ನಿಧನದಿಂದ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಸಹ ಆಸ್ಪತ್ರೆಗೆ ತೆರಳಿ, ಕಾರ್ತಿಕೆಯನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com