

ಉಡುಪಿ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯಗಳ ಬಗ್ಗೆ ಸಂಬಂಧಪಟ್ಟವರ ಗಮನ ಸೆಳೆಯಲು ಬೆಂಗಳೂರು ಟು ಭಟ್ಕಳ್ ಚಲೋ ಎಂಬ ರ್ಯಾಲಿ ಆಯೋಜಿಸಲು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದಾರೆ
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುತಾಲಿಕ್ ರಾಜ್ಯದಲ್ಲಿ ಭಟ್ಕಳ ಭಯೋತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ. ಇಲ್ಲಿನ ಭಯೋತ್ಪಾದನಾ ಕೃತ್ಯಗಳ ಬಗ್ಗೆ ಸರ್ಕಾರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
1993ರ ಏಪ್ರಿಲ್ ನಿಂದ ಡಿಸೆಂಬರ್ ನಡುವಿನ ಅವಧಿಯಲ್ಲಿ ಕೋಮುಗಲಭೆ ನಡೆದಿದ್ದು, ಇದರಲ್ಲಿ 17 ಜನರು ಸಾವನ್ನಪ್ಪಿದ್ದರು, ಈ ಬಗ್ಗೆ ಜಗನ್ನಾಥ್ ಶೆಟ್ಟಿ ಕಮಿಷನ್ ವರದಿ ಸಲ್ಲಿಸಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮುತಾಲಿಕ್ ಹೇಳಿದ್ದಾರೆ.