ಶಾಸಕ ಮಾನಪ್ಪ ವಜ್ಜಲ್ ಮನೆ ಮೇಲೆ ಐಟಿ ದಾಳಿ, 2 ಕೋಟಿ ನಗದು ಜಪ್ತಿ

ಲಿಂಗಸಗೂರು ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು,...
ಮಾನಪ್ಪ ವಜ್ಜಲ್
ಮಾನಪ್ಪ ವಜ್ಜಲ್
Updated on

ರಾಯಚೂರು: ಲಿಂಗಸಗೂರು ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು, 2 ಕೋಟಿ ರುಪಾಯಿ ನಗದು ಹಾಗೂ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.

ಇಂದು ಬೆಳಗ್ಗೆ ಲಿಂಗಸಗೂರು ಪಟ್ಟಣದಲ್ಲಿರುವ ಮಾನಪ್ಪ ವಜ್ಜಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಶಾಸಕ ಮಾನಪ್ಪ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಈ ಹಿಂದೆ 2013ರಲ್ಲೂ ಮಾನಪ್ಪ ವಜ್ಜಲ್ ಅವರ ಮನೆ ಮೇಲೆ ದಾಳಿ ನಡೆದಿತ್ತು. ಇಂದು ಎರಡನೇ ಬಾರಿ ದಾಳಿ ಮಾಡಿರುವ ಅಧಿಕಾರಿಳು, ವಜ್ಜಲ್ ಅವರ ಸಹೋದರನಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ದಾಳಿಯ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಾನಪ್ಪ, ನಾನು ಹಾಗೂ ನನ್ನ ಸಹೋದರ ಗುತ್ತಿಗೆದಾರರಾಗಿದ್ದೇವೆ. ಕೆಲವು ದಾಖಲೆಗಳನ್ನು ಸಲ್ಲಿಸುವಂತೆ ಐಟಿ ಅಧಿಕಾರಿಗಳು ಸೂಚಿಸಿದ್ದಾರೆ' ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com