
ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಾಣಿಸುತ್ತಿದೆ ಎಂದು ಮುಖ್ಯಮಂತ್ಯಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಡಿ.ಕೆ. ರವಿ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರಥಮ ಮಾಹಿತಿಯನ್ನು ಗಮನಿಸಿದರೆ, ಇದೊಂದು ಆತ್ಮಹತ್ಯೆ ಪ್ರಕರಣ ಎನಿಸುತ್ತದೆ. ಆದರೆ ಸಾವಿಗೆ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಹೇಳಿದರು.
ಇದೇ ವೇಳೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಪ್ರಕರಣದ ತನಿಖೆ ಮಾಡುವ ಸಾಮರ್ಥ್ಯ ಪೊಲೀಸರಿಗೆ ಇದೆ. ಆದರೂ ಸಿಐಡಿ ಅಥವಾ ಸಿಬಿಐಗೆ ಒಪ್ಪಿಸುವ ಕುರಿತು ಚಿಂತಿಸಲಾಗುವುದು ಎಂದು ತಿಳಿಸಿದರು.
Advertisement