

ರಾಮನಾಥಪುರಂ: ಕೇಜಕುಡಿಯಲ್ಲಿ ಖಾಸಗಿ ಬಸ್ಸೊಂದು ಮಿನಿ ವ್ಯಾನಿಗೆ ಢಿಕ್ಕಿ ಹೊಡೆದ ಕಾರಣ ಮೂವರು ಕಾಲೇಜು ವಿದ್ಯಾರ್ಥಿನಿಯರು ಸೇರಿದಂತೆ ಐದು ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.
ಎರಡು ವಾಹನಗಳು ತಿರುವಿನಲ್ಲಿ ಒಂದಕ್ಕೊಂದು ಢಿಕ್ಕಿ ಹೊಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮೃತಪಟ್ಟಿದ್ದರೆ, ವ್ಯಾನಿನ ಚಾಲಕ ಕೂಡ ಮೃತಪಟ್ಟಿದ್ದಾನೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.