

ನವದೆಹಲಿ: ಬಿಜೆಪಿಯ ಮೊದಲ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತ ರತ್ನ' ನೀಡಿರುವುದು ನಮ್ಮ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.
ಅಜಾತ ಶತ್ರು, ಅಪೂರ್ವ ವಾಗ್ಮಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾಡಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಅಟಲ್‌ಜೀ ಅವರು ಈ ದೇಶದ ಭಕ್ತ, ಹೆಮ್ಮೆಯ ಪುತ್ರ ಎಂದಿದ್ದಾರೆ. ಅಲ್ಲದೆ ಅವರ ಜೀವನ ರಾಷ್ಟ್ರಕ್ಕಾಗಿ ಸಮರ್ಪಿತವಾಗಿತ್ತು ಎಂದು ಹೇಳಿದ್ದಾರೆ.
ಅಟಲ್‌ಜೀ ಅವರು ನನ್ನಂತೆ ಹಲವು ಭಾರತೀಯರಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಹಾರೈಕೆ ಸದಾ ನಮ್ಮೊಂದಿಗಿರಲಿ ಎಂದು ಪ್ರಾರ್ಥಿಸುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.