ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ 'ಭಾರತ ರತ್ನ' ಪ್ರದಾನ

ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತ ರತ್ನ' ಶುಕ್ರವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು...
ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು, ಅಪೂರ್ವ ವಾಗ್ಮಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತ ರತ್ನ' ಶುಕ್ರವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪ್ರದಾನ ಮಾಡಿದರು.

ಇಂದು ಸಂಜೆ ವಾಜಪೇಯಿ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಣಬ್ ಮುಖರ್ಜಿ ಅವರು ಭಾರತೀಯ ಜನತಾ ಪಕ್ಷದ ಮೊದಲ ಪ್ರಧಾನಿಗೆ 'ಭಾರತ ರತ್ನ' ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಹಮಿದ್ ಅನ್ಸಾರಿ, ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಮಾರ್ಚ್ 30ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಂಡಿತ್ ಮದನ್ ಮೋಹನ್ ಮಾಳವಿಯಾ (ಮರಣೋತ್ತರ) ಅವರಿಗೆ ಭಾರತರತ್ನ  ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com