ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿಗೆ ಸಂಬಂಧಿಸಿದ ದಾಖಲೆ ಎಂದು ಹೇಳಲಾಗಿರುವ ವಾಟ್ಸ್ ಆ್ಯಪ್ ಮತ್ತು ಇತರೆ ಮಾಹಿತಿಯನ್ನು ಸಿಐಡಿ ಅಧಿಕಾರಿಗಳು ಮಾಧ್ಯಮಕ್ಕೆ ಸೋರಿಕೆ ಮಾಡಿದ್ದಾರೆಂದು ಆರೋಪಿಸಿ ಮಹಿಳಾ ಐಎಎಸ್ ಅಧಿಕಾರಿಯ ಪತಿ ಸುಧೀರ್ ರೆಡ್ಡಿ ನ್ಯಾಯಾಂಗ ನಿಂದನೆ ದೂರು ದಾಖಲಿಸಿದ್ದಾರೆ.
ಸಿಐಡಿ ಹಾಗೂ ಸರ್ಕಾರಕ್ಕೆ ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ಹಾಗೂ ವರದಿ ಬಹಿರಂಗ ಪಡಿಸದಂತೆ ಹೈಕೋರ್ಟ್ ಮಾ.22ರಂದು ಮಧ್ಯಂತರ ಆದೇಶ ನೀಡಿತ್ತು.
ಆದರೆ ಸರ್ಕಾರ, ಸಿಐಡಿ ಅಧಿಕಾರಿಗಳು ಹೈಕೋರ್ಟ್ ನ ಆದೇಶ ಉಲ್ಲಂಘಿಸಿ ಮಾಹಿತಿ ಸೋರಿಕೆ ಮಾಡಿದ್ದಾರೆ. ಆದ್ದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿ ಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಅರ್ಜಿಯಲ್ಲಿ ರಾಜ್ಯ ಸರ್ಕಾರ, ಸಿಐಡಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳ ವರದಿ ಪ್ರಕಟಿಸಿದ ಕನ್ನಡ ಹಾಗೂ ಇಂಗ್ಲಿಷ್ ದಿನಪತ್ರಿಕೆ ಹಾಗೂ ಪತ್ರಿಕೆಯ ಮುದ್ರಕ ಹಾಗೂ ಸಂಪಾದಕರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.
Advertisement