ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಆಡ್ವಾಣಿ ಸೇರಿ ಹಲವು ಬಿಜೆಪಿ ನಾಯಕರಿಗೆ ಸುಪ್ರೀಂ ನೋಟಿಸ್

1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಕೇಂದ್ರ ಸಚಿವೆ ಉಮಾ ಭಾರತಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ....
ಬಾಬ್ರಿ ಮಸೀದಿ
ಬಾಬ್ರಿ ಮಸೀದಿ

ನವದೆಹಲಿ: 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಕೇಂದ್ರ ಸಚಿವೆ ಉಮಾ ಭಾರತಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮುರಳಿ ಮನೋಹರ್ ಜೋಶಿ ಸೇರಿದಂತೆ 20 ಮಂದಿ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಅಲಹಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಹಜಿ ಮೆಹಬೂಬ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣ ಸಂಬಂಧ ಹಲವು ಬಿಜೆಪಿ ನಾಯಕರು ಸೇರಿದಂತೆ ಒಟ್ಟು 20 ಮಂದಿಗೆ ನೋಟಿಸ್ ಜಾರಿ ಮಾಡಿದೆ.

ಸುಪ್ರೀಂ ಕೋರ್ಟ್ ನಲ್ಲಿ ಮಾರ್ಚ್ 3, 2011ರಿಂದ ಇತ್ಯರ್ಥವಾಗದೆ ಉಳಿದಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್. ಎಲ್. ದತ್ತು ಹಾಗೂ ನ್ಯಾಯಮೂರ್ತಿ ಅರುಣ್ ಮಿಶ್ರ ಅವರನ್ನೊಳಗೊಂಡ ಪೀಠ, ಸಿಬಿಐ ಮತ್ತು ಬಿಜೆಪಿ ನಾಯಕರು ಸೇರಿದಂತೆ 20 ಮಂದಿಗೆ ನೋಟಿಸ್ ನೀಡಿ, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.

ಆಡ್ವಾಣಿ ಸೇರಿದಂತೆ 19 ಮಂದಿ ವಿರುದ್ಧ ಸಂಚು ಆರೋಪ ಕೈಬಿಟ್ಟಿದ್ದ ಅಲಹಾಬಾದ್ ಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com