
ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಲಕ್ಷ ಧೋರಣೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಏಪ್ರಿಲ್ 18ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ, ಕನ್ನಡ ಚಳವಳಿ ವಾಟಾಳ್ ಪಕ್ಷ ಹಾಗೂ ಡಾ.ರಾಜ್ ಅಭಿಮಾನಿ ಸಂಘ ಸೇರಿದಂತೆ ವಿವಿಧ ಕನ್ನಡ ಪರ ಸಂಘಟೆಗಳು ಕರ್ನಾಟಕ ಬಂದ್ ಕರೆ ನೀಡಿವೆ.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಏಪ್ರಿಲ್ 4ರಂದು ಬೆಂಗಳೂರಿನಿಂದ ಮೇಕೆದಾಟುವರೆಗೆ ಪ್ರತಿಭಟನಾ ರ್ಯಾಲಿ ನಡೆಸಲು ನಿರ್ಧರಿಸಿವೆ.
ಇತ್ತೀಚೆಗಷ್ಟೇ ರಾಜ್ಯದ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ರೈತಪರ ಸಂಘಟನೆಗಳು ತಮಿಳುನಾಡು ಬಂದ್ ಆಚರಿಸಿದ್ದವು. ಇತ್ತ ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ತಮಿಳುನಾಡು ವರ್ತನೆ ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ಇನ್ನು ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ ನದಿ ನೀರಿನ ವಿಷಯದಲ್ಲಿ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುತ್ತಲೇ ಇರುತ್ತದೆ. ರಾಜಕೀಯ ಲಾಭಕ್ಕಾಗಿ ತಕರಾರು ಮಾಡುತ್ತಿದ್ದು, ಇದನ್ನು ಸಮರ್ಥವಾಗಿ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದರು.
Advertisement