ಜಯಲಲಿತಾ
ಜಯಲಲಿತಾ

ಅಕ್ರಮ ಆಸ್ತಿಗಳಿಕೆ ಪ್ರಕರಣ: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ನಿರ್ದೋಷಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಸೇರಿ ಇತರೆ ಮೂವರು ಆರೋಪಿಗಳು ನಿರ್ದೋಷಿ ಎಂದು ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಪ್ರಕರಣ ಸಂಬಂಧ ಬೆಂಗಳೂರು ಸೆಷನ್ಸ್ ಕೋರ್ಟ್ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರುಪಾಯಿ ದಂಡದ ಆದೇಶವನ್ನು ಇಂದು ಹೈಕೋರ್ಟ್ ಏಕ ಸದಸ್ಯಪೀಠ ರದ್ದುಗೊಳಿಸಿದೆ.

ಜಯಲಲಿತಾ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು, ಜಯಲಲಿತಾ ಅವರ ವಿರುದ್ಧ ಅಧೀನ ನ್ಯಾಯಾಲಯ ನೀಡಿದ್ದ ಆದೇಶ ರದ್ದುಪಡಿಸಲಾಗಿದೆ. ಜಯಾ ಸೇರಿ ನಾಲ್ವರನ್ನು ಖುಲಾಸೆಗೊಳಿಸಲಾಗಿದೆ. ಅಲ್ಲದೇ ಜಯಲಲಿತಾ ಅವರಿಂದ ಜಪ್ತಿ ಮಾಡಿದ್ದ ಆಸ್ತಿಯನ್ನು ಮರುವಶಕ್ಕೆ ನೀಡಿರುವುದಾಗಿ ಹೇಳಿದರು.

ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಕಾರಣ, ಬೆಂಗಳೂರು ವಿಶೇಷ ನ್ಯಾಯಾಲಯ ಜಯಲಲಿತಾ ಸೇರಿದಂತೆ ಅವರ ಸ್ನೇಹಿತೆ ಶಶಿಕಲಾ, ದಿನಕರನ್ ಮತ್ತು ಇಳವರಸಿ ಸೇರಿ ನಾಲ್ವರು ಆರೋಪಿಗಳಿಗೂ 4 ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಬಳಿಕ ಜೈಲು ಸೇರಿದ್ದ ಯಲಲಿತಾ ಅವರು ಸೆಷನ್ಸ್ ಕೋರ್ಟ್ ನ ತೀರ್ಪು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಶೇಷ ಪೀಠ ಅಧೀನ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿದೆ.

ಎಸ್‍ಪಿಪಿಯಾಗಿ ನೇಮಕವಾದ ಬಿ.ವಿ. ಆಚಾರ್ಯ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಜಯಾ ಪ್ರಕರಣ ತಮಿಳುನಾಡಿನಿಂದ ಕರ್ನಾಟಕಕ್ಕೆ ವರ್ಗವಾದ ಬಳಿಕ ಅದರ ಸಂಪೂರ್ಣ ಹೊಣೆ ರಾಜ್ಯ ಸರ್ಕಾರದ್ದೇ ಆಗಿದೆ. ಆದರೆ ಮೇಲ್ಮನವಿ ಅರ್ಜಿಯಲ್ಲಿ ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ. ಆದ್ದರಿಂದಾಗಿ ಜಯಾ ಅರ್ಜಿ ವಿಚಾರಣೆಗೆ ಯೋಗ್ಯವಾದದ್ದಲ್ಲ ಎಂದು ಪ್ರಬಲವಾದ ಲಿಖಿತ ಹೇಳಿಕೆ ಮಂಡಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com