
ತುಮಕೂರು: ಪದ್ಮಭೂಷಣ ಪ್ರಶಸ್ತಿಯನ್ನು ನಾನು ಅಪೇಕ್ಷಿಸಿರಲಿಲ್ಲ ಮತ್ತು ಪ್ರಶಸ್ತಿ ಪಡೆಯುವುದರಿಂದ ಘನತೆ ಗೌರವ ಹೆಚ್ಚಾಗಲ್ಲ ಎಂದು ಶತಾಯುಷಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಬುಧವಾರ ಹೇಳಿದ್ದಾರೆ.
ಇಂದು ಬೆಳಗ್ಗೆ ಸಿದ್ಧಗಂಗಾ ಮಠದ ಆವರಣದಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಿ.ಉಮೇಶ್ ಅವರು ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಸ್ವಾಮೀಜಿ. ಮನುಷ್ಯನಿಗೆ ಪ್ರಶಸ್ತಿ ಮುಖ್ಯವಲ್ಲ. ಜೀವನದಲ್ಲಿ 7 ಮಾನವ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು. ಮಾನವ ಸೂತ್ರಗಳ ಪಾಲನೆಯಿಂದ ಜೀವನ ಸುಗಮವಾಗಿ ಸಾಗುತ್ತದೆ. ಇದರಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
Advertisement