ಜಯಲಲಿತಾ ಮನೆಗೆ ತಮಿಳುನಾಡು ಸಿಎಂ ಭೇಟಿ, ಇಂದೇ ರಾಜಿನಾಮೆ ಸಾಧ್ಯತೆ

ತಮಿಳುನಾಡು ಮುಖ್ಯಮಂತ್ರಿ ಓ.ಪನ್ನೀರ್ ಸೇಲ್ವಂ ಸೇರಿದಂತೆ ಅವರ ಸಂಪುಟದ 19 ಸಚಿವರು ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ...
ಜಯಲಲಿತಾ
ಜಯಲಲಿತಾ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಓ.ಪನ್ನೀರ್ ಸೇಲ್ವಂ ಸೇರಿದಂತೆ ಅವರ ಸಂಪುಟದ 19 ಸಚಿವರು ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರ ಪೊಯಸ್ ಗಾರ್ಡನ್ ನಿವಾಸಕ್ಕೆ ಭೇಟಿ ನೀಡಿದ್ದು, ಸಿಎಂ ಸ್ಥಾನ ಪನ್ನೀರ್ ಸೇಲ್ವಂ ಇಂದೇ ರಾಜಿನಾಮೆ ನೀಡುವ ಸಾಧ್ಯತೆ ಇದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ಜಯಲಲಿತಾ ಅವರು, ಪನ್ನೀರ್ ಸೇಲ್ವಂ ರಾಜಿನಾಮೆ ಬಳಿಕ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು ಸೆಷೆನ್ಸ್ ಕೋರ್ಟ್ ತೀರ್ಪಿನಿಂದಾಗಿ ಜಯಲಲಿತಾ ಅವರ ಶಾಸಕತ್ವ ರದ್ದಾಗಿದ್ದು, ಮುಂದಿನ ಆರು ತಿಂಗಳಲ್ಲಿ ಉಪ ಚುನಾವಣೆ ಮೂಲಕ ಮತ್ತೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ.

ಈ ಮಧ್ಯೆ, ಜಯಲಲಿತಾ ಅವರು ತಾವು ಒಬ್ಬರೇ ಉಪ ಚುನಾವಣೆಗೆ ಹೋಗಿ, ಒಂದೇ ವರ್ಷದಲ್ಲಿ ಎರಡು ಬಾರಿ ಚುನಾವಣೆ ಎದುರಿಸುವ ಬದಲು ಅವಧಿಗೆ ಮುನ್ನವೇ ವಿಧಾನಸಭೆಯನ್ನು ವಿಸರ್ಜಿಸಿ, ಹೊಸ ಜನಾದೇಶ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡು ವಿಧಾನಸಭೆ ಅವಧಿ 2016ರ ಮೇನಲ್ಲಿ ಅಂತ್ಯಗೊಳ್ಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com