ಜಯಲಲಿತಾ
ಜಯಲಲಿತಾ

ಜಯಾ ವಿರುದ್ಧ ಮೇಲ್ಮನವಿಗೆ 'ಕೈ' ನಿರಾಸಕ್ತಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ...

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದು ಬೇಡ ಎಂದು ಕಾಂಗ್ರೆಸ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

'ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಕೇವಲ ಆಡಳಿತಾತ್ಮಕ ಪಾತ್ರ ಇದೆ ಹೊರತು ನ್ಯಾಯಾಂಗದ ಪಾತ್ರ ಇಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸುವುದು ಬೇಡ' ಎಂದು ಪಕ್ಷದ ರಾಜ್ಯ ಘಟಕದ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಸಿ.ಎಂ.ಧನಂಜಯ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

'ನ್ಯಾಯಾಂಗ ಪ್ರಕ್ರಿಯೆಯಲ್ಲಿ ನಮ್ಮ ರಾಜ್ಯ ಭಾಗಿಯಾಗಿಲ್ಲ. ಸುಪ್ರೀಂ ಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಿದೆ. ಚೆನ್ನೈನಲ್ಲಿ ನಿಷ್ಪಕ್ಷಪಾತ ವಿಚಾರಣೆ ನಡೆಯುವುದಿಲ್ಲ ಎಂಬ ಕಾರಣಕ್ಕೆ ಸುಪ್ರೀಂ ಕೋರ್ಟ್ 2002ರಲ್ಲಿ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿಗೆ ವರ್ಗಾಯಿಸಿತ್ತು' ಎಂದು ಧನಂಜಯ ಹೇಳಿದ್ದಾರೆ.

ಜಯಲಲಿತಾ ಅವರು ಇಂದು ಐದನೇ ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಈ ಕಾನೂನು ಸಲಹೆ ನೀಡಲಾಗಿದೆ.

ಕಳೆದ ಸೆಪ್ಟೆಂಬರ್ 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರು ದೋಷಿ ಎಂದು ಬೆಂಗಳೂರು ಸೆಷೆನ್ಸ್ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆದರೆ ಮೇ 11ರಂದು ಕರ್ನಾಟಕ ಹೈಕೋರ್ಟ್ ಸೆಷೆನ್ಸ್ ಕೋರ್ಟ್ ತೀರ್ಪು ರದ್ದುಗೊಳಿಸಿ, ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿದೆ. ಹೀಗಾಗಿ ಜಯಾ ಮತ್ತೆ ಸಿಎಂ ಆಗಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com