ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಯಾ

ಮದ್ರಾಸ್ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ನೂತನ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ಜಯಲಲಿತಾ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ರಾಜ್ಯಪಾಲ ಕೆ.ರೋಸಯ್ಯ
ಜಯಲಲಿತಾ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ರಾಜ್ಯಪಾಲ ಕೆ.ರೋಸಯ್ಯ
Updated on: 

ಚೆನ್ನೈ: ನೂತನ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ಮದ್ರಾಸ್ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ 5ನೇ ಬಾರಿಗೆ ಜೆ.ಜಯಲಲಿತಾ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಮಿಳುನಾಡು ರಾಜ್ಯಪಾಲರಾದ ಕೆ.ರೋಸಯ್ಯ ಅವರು ಜಯಲಲಿತಾ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದಕ್ಕೂ ಮೊದಲು ತಮ್ಮ ನೂತನ ಸಚಿವ ಸಂಪುಟದ 28 ಸಚಿವರ ಹೆಸರುಗಳನ್ನು ಜಯಲಲಿತಾ ಅವರು ರೋಸಯ್ಯ ಅವರಿಗೆ ಪರಿಚಯಿಸಿದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಕ್ಲೀನ್ ಚಿಟ್ ಪಡೆದಿರುವ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು 5ನೇ ಬಾರಿಗೆ ತಮಿಳುನಾಡು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಜಯಲಲಿತಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಸೇರಿದಂತೆ ಒಟ್ಟು 28 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಈ ಹಿಂದೆ ಕರ್ನಾಟಕ ವಿಶೇಷ ನ್ಯಾಯಾಲಯದಲ್ಲಿ ಜಯಾ ಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅವರಿಗೆ ಶಿಕ್ಷೆಯಾದ್ದರಿಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಪ್ರಮಾಣ ವಚನ ಸ್ವೀಕರಿಸಿದ 6 ತಿಂಗಳಲ್ಲಿ ಅವರು ಮತ್ತೆ ವಿಧಾನಸಭೆ ಅಥವಾ ಪರಿಷತ್​ನಿಂದ ಆಯ್ಕೆಯಾಗಬೇಕಿದೆ.

ಸಿನಿಮಾ ತಾರೆಯರೂ ಸೇರಿದಂತೆ ಘಟಾನುಘಟಿ ನಾಯಕರು ಭಾಗಿ
ಇನ್ನು ಅಕ್ರಮ ಆಸ್ತಿಗಳಿಕೆ ಪ್ರಕರಣದಿಂದ ಸಿಎಂ ಸ್ಥಾನ ಕಳೆದುಕೊಂಡಿದ್ದ ಜಯಲಲಿತಾ ಅವರಿಗೆ ತಮಿಳುನಾಡು ರಾಜ್ಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ಇಂದು ಮದ್ರಾಸ್ ವಿವಿಯಲ್ಲಿ ನಡೆದ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿಯೂ ಇದು ಗೋಚರವಾಯಿತು. ದಕ್ಷಿಣ ಭಾರತದ ಖ್ಯಾತ ನಟರಾದ ರಜನಿಕಾಂತ್, ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್,  ಇಳಿಯರಾಜಾ, ನಟ ಶರತ್ ಕುಮಾರ್, ಐಸಿಸಿ ಚೇರ್ಮನ್ ಎನ್.ಶ್ರೀನಿವಾಸನ್, ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದಲ್ಲದೆ ಜಯಾ ಅವರ ಆಪ್ತರು,. ಅಭಿಮಾನಿಗಳು ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಸೇರಿದಂತೆ ಸುಮಾರು 3 ಸಾವಿರ ಮಂದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

2001ರಲ್ಲಿ ತಾನ್ಸಿ ಭೂ ಹಗರಣದಲ್ಲಿ ಸಿಲುಕಿ ಜಯಲಲಿತಾ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗ 6 ತಿಂಗಳ ಮಟ್ಟಿಗೆ ಇದೇ ಪನ್ನೀರ್ ಸೆಲ್ವಂ ಅವರು ಮುಖ್ಯಮಂತ್ರಿಯಾಗಿದ್ದರು. ಈ ಪ್ರಕರಣದಲ್ಲಿ ಜಯಲಲಿತಾ ಅವರು ನಿರ್ದೋಷಿಯಾದ ಬಳಿಕ ಪನ್ನೀರ್ ಸೆಲ್ವಂ ಪುನಃ ಜಯಾ ಅವರಿಗೆ ಅಧಿಕಾರ ಬಿಟ್ಟುಕೊಟ್ಟಿದ್ದರು.

2014ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕದ ವಿಶೇಷ ನ್ಯಾಯಾಲಯದಲ್ಲಿ ನಡೆದ ಅಕ್ರಮ ಆಸ್ತಿಗಳಿಗೆ ಪ್ರಕರಣದ ವಿಚಾರಣೆಯಲ್ಲಿ ಜಯಾ ವಿರುದ್ಧದ ಆರೋಪ ಸಾಬೀತಾಗಿದ್ದರಿಂದ ಮತ್ತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಆರೋಪ ಮುಕ್ತವಾದ ಬಳಿಕ ಪನ್ನೀರ್ ಸೆಲ್ವಂ ಪುನಃ ಮುಖ್ಯಮಂತ್ರಿ ಪಟ್ಟವನ್ನು ಬಿಟ್ಟುಕೊಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com