
ಬೆಂಗಳೂರು: ಒಂದಂಕಿ ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇದುವರೆಗೆ ಕೈಗೊಂಡ ಕ್ರಮ ಸೇರಿದಂತೆ ಹಗರಣದ ಸಂಪೂರ್ಣ ಮಾಹಿತಿ ನೀಡುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.
ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ರಾಜ್ಯದಲ್ಲಿ ಇಷ್ಟು ದೊಡ್ಡ ಹಗರಣ ನಡೆದಿದ್ದರು ರಾಜಭವನಕ್ಕೆ ಯಾವುಗದೇ ಮಾಹಿತಿ ನೀಡಿಲ್ಲ. ಪ್ರಕರಣದ ಬಗ್ಗೆ ಮಾಧ್ಯಮಗಳಲ್ಲಿನ ವರದಿ ಮೂಲಕ ತಿಳಿದಿದೆ. ಆ ನಿಟ್ಟಿನಲ್ಲಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಸೂಚಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ಶನಿವಾರವಷ್ಟೇ ಅಮಾನತುಗೊಳಿಸಲಾಗಿತ್ತು. ಅಲ್ಲದೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರ ಆಪ್ತ ಸಹಾಯಕನಾಗಿದ್ದ ನಾಗರಾಜ್ ಅವರನ್ನು ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಳಿಸಲಾಗಿದೆ.
Advertisement