ಜಯಾ ವಿರುದ್ಧ ಮೇಲ್ಮನವಿಗೆ ಕೆಪಿಸಿಸಿ ಕಾನೂನು ಘಟಕ ವಿರೋಧ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಸುಪ್ರೀಂ...
ಜಯಲಲಿತಾ
ಜಯಲಲಿತಾ
Updated on: 

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದು ಬೇಡ ಎಂದು ಸೋಮವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಕಾನೂನು ಘಟಕ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

'ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಕೇವಲ ಆಡಳಿತಾತ್ಮಕ ಪಾತ್ರ ಇದೆ ಹೊರತು ನ್ಯಾಯಾಂಗದ ಪಾತ್ರ ಇಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸುವುದು ಬೇಡ' ಎಂದು ಪಕ್ಷದ ರಾಜ್ಯ ಘಟಕದ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಸಿ.ಎಂ.ಧನಂಜಯ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧನಂಜಯ, ಪ್ರಕರಣವನ್ನು ಚೆನ್ನೈನಿಂದ ಬೆಂಗಳೂರಿಗೆ ವರ್ಗಾವಣೆ ಮಾಡುವ ಸಂದರ್ಭದಲ್ಲಿ ತೀರ್ಪಿನ ಬಗ್ಗೆ ಆಸಕ್ತಿ ಇಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಈಗ ನಾವು ಮೇಲ್ಮನವಿ ಸಲ್ಲಿಸಿದರೆ ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಹೇಳಿದರು.

ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ತಮಗೆ ತಿಳಿಸಿದ್ದಾರೆ ಎಂದು ಧನಂಜಯ ಅವರು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್ 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರು ದೋಷಿ ಎಂದು ಬೆಂಗಳೂರು ಸೆಷೆನ್ಸ್ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆದರೆ ಮೇ 11ರಂದು ಕರ್ನಾಟಕ ಹೈಕೋರ್ಟ್ ಸೆಷೆನ್ಸ್ ಕೋರ್ಟ್ ತೀರ್ಪು ರದ್ದುಗೊಳಿಸಿ, ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿದೆ. ಹೀಗಾಗಿ ಜಯಾ ಮತ್ತೆ ಸಿಎಂ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com