ಜೂನ್ 1ಕ್ಕೆ ಸಿಇಟಿ ಫಲಿತಾಂಶ

On june 1 cet result will be announced karnataka Examination authority said...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು:ವೃತ್ತಿ ಶಿಕ್ಷಣ ಕೋರ್ಸ್ ಗಳ ಆಯ್ಕೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿ ಫಲಿತಾಂಶ ಜೂನ್ 1ರಂದು ಪ್ರಕಟವಾಗಲಿದೆ.

ಈಗಾಗಲೇ ಪ್ರಕಟಿಸಲಾಗಿದ್ದ ವೇಳಾಪಟ್ಟಿಯನ್ವಯ ಫಲಿತಾಂಶವು ಮಂಗಳವಾರ ಹೊರಬೀಳಬೇಕಿತ್ತು. ಆದರೆ,ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಯಲ್ಲಾದ ಗೊಂದಲದಿಂದ ದಿನಾಂಕವನ್ನು ಸರ್ಕಾರ ಮುಂದೂಡಿತ್ತು.

ಮುಂದಿನ ಪ್ರಕ್ರಿಯೆ ನಿಗದಿತ ವೇಳಾಪಟ್ಟಿಯಂತೆ ನಡೆಯದೇ ಪರಿಷ್ಕರಣೆಯಾಗಲಿದ್ದು, ಬದಲಾದ ವೇಳಾಪಟ್ಟಿಯನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಇನ್ನು ಮೇ 24ರಂದು ಸ್ನಾತಕೋತ್ತರ ದಂತ ವೈದ್ಯಕೀಯ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com