ಒಂದಂಕಿ ಲಾಟರಿ ಹಗರಣ: ಸಿಬಿಐ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬಹುಕೋಟಿ ಒಂದಂಕ್ಕಿ ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಬಹುಕೋಟಿ ಒಂದಂಕಿ ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಲಾಟರಿ ಹಗರಣದ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಆದರೆ ಹಗರಣದಲ್ಲಿ ಐಪಿಎಸ್ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ಈಗಾಗಲೇ ಲಾಟರಿ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ಹಾಗೂ
ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರ ಆಪ್ತ ಸಹಾಯಕನಾಗಿದ್ದ ನಾಗರಾಜ್ ಅವರನ್ನುರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಐಜಿ ಮಟ್ಟದ ಆರು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com