ದೆಹಲಿ ಅಧಿಕಾರಶಾಹಿ ವಿವಾದ: ಸುಪ್ರೀಮ್ ಕೋರ್ಟ್ ನಲ್ಲಿ ಮರುವಿಚಾರಣೆ

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ದೆಹಲಿ ಸರ್ಕಾರದ ಅಧಿಕಾರಿಗಳನ್ನು ನೇಮಿಸುವ ಅಥವಾ ವರ್ಗಾಯಿಸುವ ಯಾವುದೇ ಅಧಿಕಾರ ಇಲ್ಲ ಎಂದು
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ದೆಹಲಿ ಸರ್ಕಾರದ ಅಧಿಕಾರಿಗಳನ್ನು ನೇಮಿಸುವ ಅಥವಾ ವರ್ಗಾಯಿಸುವ ಯಾವುದೇ ಅಧಿಕಾರ ಇಲ್ಲ ಎಂದು ದೆಹಲಿ ಹೈಕೋರ್ಟ್ ನೀಡಿರುವ ತೀರ್ಪಿನ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಈ ತೀರ್ಪನ್ನು ಸುಪ್ರೀಮ್ ಕೋರ್ಟ್ ನಲ್ಲಿ ಪ್ರಶ್ನಿಸಿದ್ದು ಶುಕ್ರವಾರ ವಿಚಾರಣೆಗೆ ಬರಲಿದೆ.

ನ್ಯಾಯಮೂರ್ತಿ ಎಸ್ ಕೆ ಸಿಕ್ರಿ ಮತ್ತು ಯು ಯು ಲಲಿತ್ ಅವರನ್ನು ಒಳಗೊಂಡ ಅಪೆಕ್ಸ್ ಕೋರ್ಟ್ ಪೀಠ ಈ ವಿಷಯದ ವಿಚಾರಣೆಯನ್ನು ನಾಳೆ ಆಲಿಸಲಿದ್ದೇವೆ ಎಂದು ಗುರುವಾರ ತಿಳಿಸಿದ್ದಾರೆ. ಸರ್ಕಾರಿ ಅಭಿಯೋಜಕ ಮಹಿಂದರ್ ಸಿಂಗ್ ಈ ವಿಷಯದ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ಮನವಿ ಮಾಡಿದ್ದರು.

ಎಲ್ಲ ಸೇವೆಗಳನ್ನು ಲೆಫ್ಟಿನೆಂಟ್ ಗವರ್ನರ್ ಅಧಿಕಾರದಲ್ಲಿ ಬರುವಂತೆ ಹೊರಡಿಸಿದ್ದ ಕೇಂದ್ರ ಸರ್ಕಾರದ ಅಧಿಸೂಚನೆ ತಪ್ಪು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com