ಜಯಾ ವಿರುದ್ಧ ಮೇಲ್ಮನವಿ: ಕರ್ನಾಟಕದ ನಿರ್ಧಾರ ಸ್ವಾಗತಿಸಿದ ಕಾಂಗ್ರೆಸ್, ಪಿಎಂಕೆ

ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ...
ಜಯಲಲಿತಾ
ಜಯಲಲಿತಾ

ಚೆನ್ನೈ: ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ತಮಿಳುನಾಡು ಕಾಂಗ್ರೆಸ್ ಹಾಗೂ ಪಿಎಂಕೆ ಪಕ್ಷಗಳು ಸ್ವಾಗತಿಸಿವೆ.

ಜಯಾ ವಿರುದ್ಧ ಮೇಲ್ಮನವಿ ಸಲ್ಲಿಸುವ ತಮ್ಮ ಪಕ್ಷದ ಸರ್ಕಾರ ನಿರ್ಧಾರವನ್ನು ತಮಿಳುನಾಡು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇವಿಕೆಎಸ್ ಇಳಂಗೊವನ್ ಹಾಗೂ ಪಿಎಂಕೆ ಸಂಸ್ಥಾಪಕ ಎಸ್. ರಾಮದೊಸ್ ಸ್ವಾಗತಿಸಿದ್ದಾರೆ.

ಮೇಲ್ಮನವಿ ಸಲ್ಲಿಸಲು 90 ದಿನಗಳ ಕಾಲವಕಾಶ ಇದ್ದರೂ ಕರ್ನಾಟಕ ಸರ್ಕಾರ 20 ದಿನಗಳಲ್ಲೇ ಶೀಘ್ರ ನಿರ್ಧಾರ ತೆಗೆದುಕೊಂಡಿದೆ ಎಂದು ಇಳಂಗೊವನ್ ಅವರು ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸೆಷೆನ್ಸ್ ಕೋರ್ಟ್ ತೀರ್ಪುನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ, ಜಯಲಲಿತಾ ಹಾಗೂ ಇತರೆ ಮೂವರು ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿದೆ. ಎರಡು ವಿಭಿನ್ನ ತೀರ್ಪು ಬಂದರೂ ಅಂತಿಮವಾಗಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ದೊರೆಯಲಿದೆ ಎಂದು ಇಳಂಗೊವನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಯಲಲಿತಾ ಅವರನ್ನು ಹೈಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿತ್ತು. ತೀರ್ಪಿನ ಬಗ್ಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಬಿವಿ ಆಚಾರ್ಯ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಳಗ್ಗೆ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ ಅಂತಿಮವಾಗಿ ಜಯಾ ವಿರುದ್ಧ ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com