ಪಂಚಾಯತ್ ಚುನಾವಣೆ: ಮೋದಿಯವರ ವಾರಣಾಸಿ ಕ್ಷೇತ್ರದ ೫೮ ಸ್ಥಾನಗಳಲ್ಲಿ ಬಿಜೆಪಿಗೆ ೮ ಮಾತ್ರ

ಲೋಕಸಭಾ ಚುನಾವಣೆಗಳಲ್ಲಿ ಭಾರಿ ಯಶಸ್ಸು ಗಳಿಸಿದ್ದ ಬಿಜೆಪಿ ಪಕ್ಷ ಉತ್ತರಪ್ರದೇಶದ ಪಂಚಾಯತ್ ಚುನಾವಣೆಗಳಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಲೋಕಸಭಾ ಚುನಾವಣೆಗಳಲ್ಲಿ ಭಾರಿ ಯಶಸ್ಸು ಗಳಿಸಿದ್ದ ಬಿಜೆಪಿ ಪಕ್ಷ ಉತ್ತರಪ್ರದೇಶದ ಪಂಚಾಯತ್ ಚುನಾವಣೆಗಳಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಗೆದ್ದಿದ್ದ ವಾರಣಾಸಿ ಕ್ಷೇತ್ರದಲ್ಲಿ ೫೮ ಪಂಚಾಯಿತಿ ಸ್ಥಾನಗಳಲ್ಲಿ ೮ ಸ್ಥಾನಗಳನ್ನಷ್ಟೇ ಗೆದ್ದು ತೀವ್ರ ಮುಖಭಂಗ ಅನುಭವಿಸಿದೆ.

ಗೃಹಮಂತ್ರಿ ರಾಜನಾಥ್ ಸಿಂಗ್ ಅವರ ಲಕನೌ ಕ್ಷೇತ್ರದ ೨೮ ಸ್ಥಾನಗಳಲ್ಲಿ ಬಿಜೆಪಿ ೪ ಸ್ಥಾನಗಳನ್ನಷ್ಟೇ ಗೆದ್ದಿದೆ.

ಉತ್ತರ ಪ್ರದೇಶದ ಗ್ರಾಮೀಣ ಪ್ರದೇಶದಲ್ಲೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಲು ಹವಣಿಸುತ್ತಿದ್ದ ಬಿಜೆಪಿ ಈ ಚುನಾವಣೆಗಳಲ್ಲಿ ತೀವ್ರ ಮುಖಭಂಗ ಅನುಭವಿಸುವ ಸೂಚನೆಗಳಿವೆ. ಇನ್ನು ಮತ ಎಣಿಕೆ ಕಾರ್ಯ ಮುಂದುವರೆದಿದ್ದು ಅಂತಿಮ ಫಲಿತಾಂಶ ಹೊರಬೀಳಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com