ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಗುರುವಾರ ಸಂಜೆ 5 ಗಂಟೆಗೆ ಮುಕ್ತಾಯಗೊಂಡಿದ್ದು, ಒಟ್ಟು ಶೇ.59.46ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಮಧುಬನಿ, ದರ್ಭಾಂಗ, ಸುಪುವಾಲ್, ಮಾಧೇಪುರ, ಸಹರ್ಸಾ, ಅರರಿಯಾ, ಕಿಸಾನ್ಗಂಜ್, ಪೂರ್ನೀ ಸೇರಿದಂತೆ ಒಟ್ಟು 57 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಚುನಾವಣೆಯಲ್ಲಿ 58 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 827 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.
ಇಂದು ಮತದಾನ ಪ್ರಕ್ರಿಯೆಯು 14,709 ಮತಗಟ್ಟೆಗಳಲ್ಲಿ ನಡೆದಿದೆ. ಮತದಾನ ಪ್ರಕ್ರಿಯೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದ ಚುನಾವಣಾ ಆಯೋಗವು 74, 469 ರಾಜ್ಯ ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರ ಅರೆಸೇನಾ ಪಡೆಗಳನ್ನು ನಿಯೋಜಿಸಿತ್ತು.
Advertisement