ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಪ್ರಧಾನ ಸುದ್ದಿ
೧೦ ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕ
ತಕ್ಷಣದಿಂದ ಜಾರಿಗೆ ಬರುವಂತೆ ೧೦ ಮಂದಿ ಸಂಸದೀಯ ಕಾರ್ಯದರ್ಶಿಗಳನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ...
ಬೆಂಗಳೂರು: ತಕ್ಷಣದಿಂದ ಜಾರಿಗೆ ಬರುವಂತೆ ೧೦ ಮಂದಿ ಸಂಸದೀಯ ಕಾರ್ಯದರ್ಶಿಗಳನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ವಿಜಯಪುರ ನಗರ ಶಾಸಕ - ಮಕ್ಬುಲ್ ಎಸ್. ಭಗವಾನ್, ನಾಗಠಾಣ ಶಾಸಕ ರಾಜು ಅಲಗೂರು, ಚಿಂಚೋಳ್ಳಿ ಶಾಸಕ ಉಮೇಶ್ ಜಾದವ್, ಶಿರಹಟ್ಟಿ ಶಾಸಕ ದೊಡ್ಡಮನಿ ರಾಮಕೃಷ್ಣ ಸಿದ್ದಲಿಂಗಪ್ಪ, ಕುಂದಗೋಳ ಶಾಸಕ ಸಿ.ಎಸ್.ಶಿವಳ್ಳಿ, ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ, ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್, ಸಂಡೂರು ಶಾಸಕ ಇ.ತುಕಾರಾಂ, ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದರಾಜ್ ಅವರನ್ನು ತಕ್ಷಣದಿಂದ ಬರುವಂತೆ ತಮ್ಮ ಸಂಸದೀಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಳಿಸಿ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಇವರಿಗೆ ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ