ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ ತಮ್ಮ ಮೈತ್ರೀಕೂಟದ ಗೆಲುವು ಬಿಹಾರಿಗಳ ಪ್ರತಿಷ್ಠೆಯ ಗೆಲುವಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಬಿಹಾರ ಚುನಾವಣಾ ಫಲಿತಾಂಶದಲ್ಲಿ ಜೆಡಿಯು, ಆರ್ ಜೆಡಿ ನೇತೃತ್ವ ಮಹಾಘಟ್ ಬಂಧನ ಮೈತ್ರೀಕೂಟ ಅಭೂತ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಪ್ರಸ್ತುತ ಚುನಾವಣೆ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ವಿರೋಧ ಪಕ್ಷದ ಅವಶ್ಯಕತೆ ಇದೆ ಎಂಬುದನ್ನು ಬಿಹಾರದ ಜನತೆ ತೋರಿಸಿಕೊಟ್ಟಿದ್ದಾರೆ. ಬಿಜೆಪಿ ಪಕ್ಷದ ಒಡೆದು ಆಳುವ ನೀತಿಯನ್ನು ಜನತೆ ತಿರಸ್ಕರಿಸಿದ್ದು, ಬಿಹಾರದ ಎಲ್ಲ ವಿಭಾಗದ ಜನರು ನಮಗೆ ಮತ ನೀಡಿದ್ದಾರೆ. ಬಿಹಾರದ ಪ್ರತಿಷ್ಠೆಗೆ ಸಂದ ಜಯವಿದು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿದ ಅವರು, ಇದೊಂದು ಜನತಾ ಅಭಿಯಾನ ಮತ್ತು ಪ್ರಧಾನಿ ಮೋದಿ ವಿರುದ್ಧದ ಅಭಿಯಾನವಾಗಿದೆ. ಇದನ್ನು ನಾವು ಇಲ್ಲಿಗೇ ಬಿಡಡೇ ದೇಶವ್ಯಾಪಿ ವ್ಯಾಪಿಸುವಂತೆ ನೋಡಿಕೊಳ್ಳುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಬಿಜೆಪಿ ರಾಷ್ಟ್ರೀಯ ಮುಖಂಡರೆಲ್ಲರೂ ನಮ್ಮ ಗೆಲುವಿಗೆ ಶುಭಾಶಯ ಕೋರಿದ್ದಾರೆ. ಬಿಹಾರ ಚುನಾವಣಾ ಫಲಿತಾಂಶವನ್ನು ನಾವು ಸಕಾರಾತ್ಮಕವಾಗಿ ನೋಡುತ್ತಿದ್ದು, ರಾಜ್ಯದ ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರ ನಮಗೆ ನೆರವಾಗುತ್ತದೆ ಎಂದು ಭಾವಿಸಿದ್ದೇವೆ ಎಂದು ಹೇಳಿದರು.
Advertisement