ಕೆಂಪೇಗೌಡರ ಬಗ್ಗೆ ಅವಹೇಳನ: ಗಿರೀಶ್ ಕಾರ್ನಾಡ್ ಕ್ಷಮೆಯಾಚನೆ

ನಾಡಪ್ರಭು ಕೆಂಪೇಗೌಡರು ಸ್ವಾತಂತ್ರ್ಯ ಸೇನಾನಿ ಅಲ್ಲ ಹೀಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಸೂಕ್ತ ಎಂದು ಹೇಳಿಕೆ ನೀಡಿ...
ಗಿರೀಶ್ ಕಾರ್ನಾಡ್
ಗಿರೀಶ್ ಕಾರ್ನಾಡ್
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಸ್ವಾತಂತ್ರ್ಯ ಸೇನಾನಿ ಅಲ್ಲ ಹೀಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಸೂಕ್ತ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಇಂದು ತಮ್ಮ ನಿವಾಸದಲ್ಲಿ ಈ ಬಗ್ಗೆ ಕ್ಷಮೆಯಾಚಿಸಿದ್ದಾರೆ. 
ತಮ್ಮ ಜೆಪಿ ನಗರದ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ದೂರುದ್ದೇಶದಿಂದ ಕೆಂಪೇಗೌಡರ ಬಗ್ಗೆ ಈ ರೀತಿ ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯಿಂದ ರಾಜ್ಯದ ಜನತೆಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ನಾನು ನನ್ನು ಅಭಿಪ್ರಾಯವನ್ನು ಹೇಳಿದ್ದನಷ್ಟೇ ಎಂದು ಹೇಳಿದ್ದಾರೆ.
ಕಾರ್ನಾಡ್ ಗೆ ಗೃಹಸಚಿವ ಪರಮೇಶ್ವರ್ ಕರೆ
ಕೆಂಪೇಗೌಡರ ಕುರಿತು ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಗುರಿಯಾಗಿದ್ದು, ವಿವಾದವನ್ನು ತಣ್ಣಗೆ ಮಾಡಿ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಗಿರೀಶ್ ಕಾರ್ನಾಡ್ ಅವರಿಗೆ ದೂರವಾಣಿ ಕರೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗಿರೀಶ್ ಕಾರ್ನಾಡ್ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.
ಕಾರ್ನಾಡ್ ವಿರುದ್ಧ ಪ್ರತಿಭಟನೆ
ಕೆಂಪೇಗೌಡರ ಬಗ್ಗೆ ಹೇಳಿಕೆ ನೀಡಿದ್ದ ಗಿರೀಶ್ ಕಾರ್ನಾಡ್ ವಿರುದ್ಧ ಬಿಜೆಪಿ ಬೆಂಗಳೂರಿನ ಮಲ್ಲೇಶ್ವರಂ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಪ್ರತಿಭಟನಾಕಾರರು ಸಾಹಿತಿ ಕಾರ್ನಾಡ್ ಗೆ ವಿರುದ್ಧ ಧಿಕ್ಕಾರ ಕೂಗಿದರು. ಗಿರೀಶ್ ಕಾರ್ನಾಡ್ ಓರ್ವ ಮತಿಹೀನ ಸಾಹಿತಿ ಎಂದು ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com