ಗುರುವಾರ 7ನೇ ವೇತನ ಆಯೋಗದ ವರದಿ ಸಲ್ಲಿಕೆ, ಶೇ.15ರಷ್ಟು ಹೆಚ್ಚಳ ಸಾಧ್ಯತೆ

7ನೇ ವೇತನ ಆಯೋಗದ ಶಿಫಾರಸು ಈ ಬಾರಿ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ನಿರಾಶೆ ಮೂಡಿಸುವ ಸಾಧ್ಯತೆ ಇದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: 7ನೇ ವೇತನ ಆಯೋಗದ ಶಿಫಾರಸು ಈ ಬಾರಿ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ನಿರಾಶೆ ಮೂಡಿಸುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಂತೆ ರಚಿಸಿದ್ದ 7ನೇ ವೇತನ ಆಯೋಗ ಗುರುವಾರ ಕೇಂದ್ರ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸುತ್ತಿದ್ದು, ಶೇ.15ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳ ತಿಳಿಸಿವೆ.

ಕೇಂದ್ರ ಸಚಿವ ಸಂಪುಟದ ಅನುಮತಿ ದೊರೆತ ನಂತರ ಜನವರಿ 1, 2016ರಿಂದ 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಬರಲಿದ್ದು, ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ 54 ಲಕ್ಷ ಪಿಂಚಣಿದಾರರಿಗೆ ಇದರ ಲಾಭ ದೊರೆಯಲಿದೆ.

2008ರಲ್ಲಿ 6ನೇ ವೇತನ ಆಯೋಗ ಶೇ.35ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಈ ಬಾರಿ ಅದಕ್ಕೂ ಹೆಚ್ಚಿನ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ನೌಕರರಿಗೆ ನಿರಾಶೆ ಮೂಡಿಸಿದೆ.

2014ರ ಫೆಬ್ರವರಿಯಲ್ಲಿ ನ್ಯಾ. ಎ.ಕೆ. ಮಾಥುರ್ ನೇತೃತ್ವದಲ್ಲಿ ಅಂದಿನ ಯುಪಿಎ ಸರ್ಕಾರ 7ನೇ ವೇತನ ಆಯೋಗವನ್ನು ರಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com