ಲೋಕಾಯುಕ್ತರ ಪದಚ್ಯುತಿಗೆ ಬಿಜೆಪಿ, ಜೆಡಿಎಸ್ ನಿಂದ ಸಹಿ ಸಂಗ್ರಹ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರನ್ನು ಪದಚ್ಯುತಿಗೊಳಿಸುವಂತೆ...
ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್
ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಮಂಗಳವಾರ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸಹಿ ಸಂಗ್ರಹಿಸಿ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪನವರಿಗೆ ಮನವಿ ಸಲ್ಲಿಸಿದರು. ಮ

ಇನ್ನು ವಿಧಾನಪರಿಷತ್ ನಲ್ಲೂ ಬಿಜೆಪಿ, ಜೆಡಿಎಸ್ ಶಾಸಕರು ಸಹಿ ಸಂಗ್ರಹಿಸಿ ಸಭಾಪತಿ ಡಿಎಚ್ ಶಂಕರಮೂರ್ತಿಯವರಿಗೂ ಮನವಿ ಮಾಡಿವೆ.

ಲೋಕಾಯುಕ್ತ ನ್ಯಾ.ಭಾಸ್ಕರ ರಾವ್  ಪದಚ್ಯುತಿಗೆ ಸಂಬಂಧಿಸಿದಂತೆ ಬಿಜೆಪಿಯ ಎಲ್ಲಾ 46 ಹಾಗೂ ಜೆಡಿಎಸ್ ನ 37 ಶಾಸಕರು ಸಹಿ ಹಾಕಿ ಮನವಿ ಸಲ್ಲಿಸಿದ್ದಾರೆ ಎಂದು ಮನವಿ ಸ್ವೀಕರಿಸಿದ ನಂತರ ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಸದನದಲ್ಲಿ ಎಲ್ಲಾ ಶಾಸಕರ ಒಪ್ಪಿಗೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿಕೊಳ್ಳುವುದಾಗಿ ಸ್ಪೀಕರ್ ತಿಳಿಸಿದ್ದಾರೆ. ಅಲ್ಲದೆ ವರದಿ ಬಂದ ನಂತರ ಅದರ ಸಾಧಕ, ಬಾಧಕ ಅರಿತು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಲೋಕಾಯುಕ್ತರ ಪದಚ್ಯುತಿ ಪ್ರಕ್ರಿಯೆ ಚಾಲನೆಗೆ ಸದನದ ಮೂರನೇ ಒಂದರಷ್ಟು ಸದಸ್ಯರು ಸಹಿ ಮಾಡಿದ ಪತ್ರ ನೀಡಿದಲ್ಲಿ ಮಾತ್ರ ಅದು ಮಾನ್ಯಗೊಳ್ಳುತ್ತದೆ. ಆ ನಿಟ್ಟಿನಲ್ಲಿ ಬಿಜೆಪಿ, ಜೆಡಿಎಸ್ ಶಾಸಕರು ಸೇರಿ ಮನವಿ ಪತ್ರಕ್ಕೆ ಸಹಿ ಹಾಕಿ, ಸ್ಪೀಕರ್ ಗೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com