ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡನೆ, ಜಿಪಂ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ

ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡುವ ಮೂಲಕ ಕೆಳ ಹಂತದ ವ್ಯವಸ್ಥೆಯನ್ನು ಬಲಪಡಿಸುವ ಮಹತ್ತರ ಪಂಚಾಯತ್ ರಾಜ್...
ಎಚ್.ಕೆ.ಪಾಟೀಲ್
ಎಚ್.ಕೆ.ಪಾಟೀಲ್

ಬೆಂಗಳೂರು: ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡುವ ಮೂಲಕ ಕೆಳ ಹಂತದ ವ್ಯವಸ್ಥೆಯನ್ನು ಬಲಪಡಿಸುವ ಮಹತ್ತರ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಅವರು ಇಂದು ವಿಧಾಸಭೆಯಲ್ಲಿ ಶಾಸಕ ರಮೇಶ್ ಕುಮಾರ್ ಅವರ ವರದಿಯನ್ನು ಆಧರಿಸಿ ಸಿದ್ಧಪಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡುವ ಮಹತ್ವದ ತಿದ್ದುಪಡಿ ಈ ವಿಧೇಯಕದಲ್ಲಿದೆ. ಈ ವಿಧೇಯಕ ಅಂಗೀಕಾರವಾದರೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರು ರಾಜ್ಯ ಸಚಿವರ ಸ್ಥಾನಮಾನ, ಸಂಬಳ, ಇನ್ನಿತರ ಭತ್ಯೆಗಳನ್ನು ಪಡೆಯಲಿದ್ದಾರೆ.

ಪಂಚಾಯತ್ ವ್ಯವಸ್ಥೆಯಲ್ಲಿ ಪಾರದರ್ಶಕತೆಗೆ ಒತ್ತು ನೀಡಿ, ಎಲ್ಲಾ ಚುನಾಯಿತ ಸದಸ್ಯರ ಆಸ್ತಿ ಘೋಷಣೆಯನ್ನು ಕಡ್ಡಾಯಗೊಳಿಸುವ, ಗ್ರಾಮದ ಅಭಿವೃದ್ಧಿಯ ಸಂಪೂರ್ಣ ಜವಾಬ್ದಾರಿಯನ್ನು ಪಂಚಾಯ್ತಿಗೆ ನೀಡುವ ಹಾಗೂ ಪಂಚಾಯ್ತಿ ಸದಸ್ಯರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಈ ತಿದ್ದುಪಡಿ ವಿಧೇಯಕದ ಉದ್ದೇಶವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com