
ಬೆಂಗಳೂರು: ರಾಜ್ಯದಲ್ಲಿ ಹಿಂಸಾಚಾರ ಹಾಗೂ ಗದ್ದಲಕ್ಕೆ ಕಾರಣವಾಗಿದ್ದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಬಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸುವ ಔಚಿತ್ಯ ಏನಿತ್ತು ಎಂದು ತಮ್ಮನ್ನು ಭೇಟಿ ಮಾಡಲು ಬಂದಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ರಾಜ್ಯಪಾಲರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಟಿಪ್ಪು ಜಯಂತಿಯನ್ನು ಆಚರಿಸಿರಲಿಲ್ಲ. ಈಗ ವಿವಾದಿತ ವ್ಯಕ್ತಿಯ ಜಯಂತಿ ಆಚರಿಸುವ ಅಗತ್ಯ ಏನಿತ್ತು ಎಂದು ರಾಜ್ಯಪಾಲರು ಗೃಹ ಸಚಿವರನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ಟಿಪ್ಪು ಜಯಂತಿ ಆಚರಣೆ ವೇಳೆ ಉಂಟಾದ ಗಲಭೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿರುವುದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.
ಟಿಪ್ಪು ಜಯಂತಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯಪಾಲರು, ಜಯಂತಿ ಆಚರಿಸುವ ನಿರ್ಧಾರ ತೆಗೆದುಕೊಂಡ ಮೇಲೆ ಸೂಕ್ತ ಬಂದೋಬಸ್ತ್ ಒದಗಿಸಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement