ಪ್ರಧಾನ ಸುದ್ದಿ

ಮೌಢ್ಯ ನಿಷೇಧಕ್ಕೆ ಸರ್ಕಾರದಲ್ಲಿ ಚರ್ಚೆಯೇ ಆಗಿಲ್ಲ: ಸಿದ್ದರಾಮಯ್ಯ

ಮೌಢ್ಯ ನಿಷೇಧಕ್ಕೆ ಸರ್ಕಾರದಲ್ಲಿ ಚರ್ಚೆಯೇ ಆಗಿಲ್ಲ: ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Published On :

ಕೊಪ್ಪಳ: ``ಮೌಢ್ಯ ನಿಷೇಧ ಕಾನೂನು ಜಾರಿ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿಲ್ಲ. ವಿಧಾನಮಂಡಲದಲ್ಲಿ ಈ ವಿಧೇಯಕ ಮಂಡಿಸುವ ಪ್ರಸ್ತಾವವೂ ಇಲ್ಲ,''ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳದಲ್ಲಿ ಶನಿವಾರ ಮಾತನಾಡಿದ ಅವರು,``ಮೌಢ್ಯ ನಿಷೇಧ ಕುರಿತು ಕೇವಲ ಸಾರ್ವಜನಿಕ ವಲಯದಲ್ಲಿ ಮಾತ್ರ ಚರ್ಚೆ ನಡೆಯುತ್ತಿದೆ. ಆದರೆ ಸರ್ಕಾರದ ಮುಂದೆ ಅಂಥ ಪ್ರಸ್ತಾವವಿಲ್ಲ,'' ಎಂದರು. ಅಲ್ಲದೆ, ``ಮದುವೆಗಳ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ಖಾಸಗಿ ಸಂಸ್ಥೆಯೊಂದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು. ಈ ಕುರಿತು ವಿಧಾನಸಭೆಯಲ್ಲಿ ಖಾಸಗಿ ವಿಧೇಯಕವೂ ಮಂಡನೆಯಾಗಿದೆ. ಈ ಬಗ್ಗೆ ಸದನದಲ್ಲಿ ಚರ್ಚಿಸಲಾಗುವುದು'' ಎಂದೂ ತಿಳಿಸಿದರು.

ಹಗುರ ಮಾತು ಬೇಡ: ದಿನೇ ದಿನೆ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ನೋವಿನ ಸಂಗತಿ. ಆದರೆ, ಅವರ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅದು ಮೊದಲು ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಬೆಟ್ಟಿಂಗ್ ನಲ್ಲಿ ಶಾಸಕ ಶಾಮೀಲಾಗಿಲ್ಲ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಕಾಂಗ್ರೆಸ್ ಶಾಕರ ಪಾಲು ಇರುವುದು ಶುದ್ಧ ಸುಳ್ಳು, ಈ ಕುರಿತು ಯಾರ ಮೇಲೆ ಪ್ರಕರಣ ದಾಖಲಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅವರು ಬಿಜೆಪಿಯವರು, ಕಾಂಗ್ರೆಸ್ ನವರು ಎಂದು ಭೇದಭಾವ ಮಾಡುವುದಿಲ್ಲ. ಸರ್ಕಾರ ಕ್ರಿಮಿನಲ್ ಆರೋಪಗಳಿಗೆ ರಕ್ಷಣೆ ನೀಡುತ್ತಿಲ್ಲ. ಹಾಗೆಯೇ ರಾಘವೇಶ್ವರ ಶ್ರೀ ಪ್ರಕರಣಕ್ಕೆ ಸಂಬಂಧಿಸಿ ಕೆಲವೊಂದು ಪ್ರಕರಣಗಳನ್ನು ಸೂಕ್ತ ಕಾರಣ ನೀಡಿ ಹಿಂದಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ರಕ್ಷಿಸುವ ಕೆಲಸವನ್ನು ಸರ್ಕಾರದಿಂದ ಆಗುತ್ತಿಲ್ಲ, ಆಗುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಅಂತಿಮ ನಮನ: ಶುಕ್ರವಾರ ನಿಧನರಾದ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಅವರ ತಂದೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಬಸವಲಿಂಗಪ್ಪ ರಾಯರೆಡ್ಡಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆ ಎನ್ನುವ ಸುದ್ದಿ ತಿಳಿದ ತಾಲೂಕಿನ ನೂರಾರು ಜನರು ರಾಯರೆಡ್ಡಿ ಅವರ ನಿವಾಸದ ಹತ್ತಿರ ಕಾದು ಕುಳಿತಿದ್ದರು. ಸಿದ್ದರಾಮಯ್ಯ ಅವರು ಕೊಪ್ಪಳದ ರಾಷ್ಟ್ರೀಯ ಹೆದ್ದಾರಿ ಮುಖಾಂತರ ತಳಕಲ್ ಗ್ರಾಮಕ್ಕೆ ತೆರಳಿ ಬಸವಲಿಂಗಪ್ಪ ಅವರಿಗೆ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.