ರಾಷ್ಟ್ರಕವಿ ಕುವೆಂಪು ಅವರ ನಿವಾಸ ಕವಿಶೈಲ (ಸಂಗ್ರಹ ಚಿತ್ರ)
ರಾಷ್ಟ್ರಕವಿ ಕುವೆಂಪು ಅವರ ನಿವಾಸ ಕವಿಶೈಲ (ಸಂಗ್ರಹ ಚಿತ್ರ)

ಕವಿಶೈಲದಲ್ಲಿ ಕಳ್ಳರ ದಾಂಧಲೆ, ಕುವೆಂಪು ಅವರ ಪ್ರಶಸ್ತಿ ಕಳವು

ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯಲ್ಲಿರುವ ಮನೆಯ ಮೇಲೆ ಸೋಮವಾರ ರಾತ್ರಿ ಕಳ್ಳರು ದಾಳಿ ಮಾಡಿದ್ದು, ಅಮೂಲ್ಯವಸ್ತುಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ...
Published on

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯಲ್ಲಿರುವ ಮನೆಯ ಮೇಲೆ ಸೋಮವಾರ ರಾತ್ರಿ ಕಳ್ಳರು ದಾಳಿ ಮಾಡಿದ್ದು, ಅಮೂಲ್ಯವಸ್ತುಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿರುವ ಕುವೆಂಪು ಅವರ ನಿವಾಸ ಕವಿಶೈಲದ ಮೇಲೆ ಕಳೆದ ರಾತ್ರಿ ಕೆಲ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಕುವೆಂಪು  ಅವರ ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗಳು ಸೇರಿದಂತೆ ಹಲವು ಅಮೂಲ್ಯ ವಸ್ತುಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ. ಮನೆಗೆ ನುಗ್ಗುತ್ತಿದ್ದಂತೆಯೇ ಅಲ್ಲಿ  ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಕಳ್ಳರು, ಮನೆಯ ಶೋ ಕೇಸ್ ಗಾಜನ್ನು ಪುಡಿ-ಪುಡಿ ಮಾಡಿ ಅಲ್ಲಿದ್ದ ಅತ್ಯಮೂಲ್ಯ ವಸ್ತುಗಳನ್ನು ತೆಗೆದುಕೊಂಡು  ಪರಾರಿಯಾಗಿದ್ದಾರೆ.

ಪ್ರಸ್ತುತ ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ. ಪೊಲೀಸ್ ಪ್ರಾಥಮಿಕ ಮೂಲಗಳ ಪ್ರಕಾರ ಕವಿಶೈಲದಲ್ಲಿ ಸಿಬ್ಬಂದಿಗಳು ಕಡಿಮೆ ಇದ್ದ ಸಮಯನ್ನು  ಕಾದು ದುಷ್ಕರ್ಮಿಗಳು ಈ ಕೃತ್ಯವೆಸಗಿರಬಹುದು ಎಂದು ಹೇಳಲಾಗುತ್ತಿದೆ. ರಾಷ್ಟ್ರಕವಿ ಕುವೆಂಪು ಹುಟ್ಟೂರಾದ ತೀರ್ಥಹಳ್ಳಿ ಕವಿಶೈಲ ನಿವಾಸ ಪ್ರಸ್ತುತ ಪ್ರಮುಖ ಪ್ರವಾಸಿ ಸ್ಥಳವಾಗಿದ್ದು,  ಪ್ರತಿನಿತ್ಯ ನೂರಾರು ಜನರು ಕವಿಶೈಲಕ್ಕೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲೇ ಕಳ್ಳರ ದಾಳಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com