ನವದೆಹಲಿ: ಬಳ್ಳಾರಿ ಜಿಲ್ಲೆಗೆ ಪ್ರವೇಶಿಸಲು ತಮಗೆ ಅನುಮತಿ ನೀಡುವಂತೆ ಕೋರಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ತೀರ್ಪು ನೀಡಿ, ರೆಡ್ಡಿ ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ ಎಂದು ಈ ಹಿಂದೆ ವಿಶೇಷ ಸಿಬಿಐ ಕೋರ್ಟ್ ಆದೇಶಿಸಿತ್ತು. ವಿಶೇಷ ಸಿಬಿಐ ಆದೇಶದ ವಿರುದ್ಧ ರೆಡ್ಡಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು.
ಇಂದು ರೆಡ್ಡಿಯ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ದತ್ತು ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಬಳ್ಳಾರಿ ಪ್ರವೇಶಕ್ಕೆ ಅನುಮತಿ ಇಲ್ಲ ಎಂದು ಆದೇಶ ನೀಡುವ ಮೂಲಕ ಸಿಬಿಐ ವಿಶೇಷ ಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಸಂಬಂಧ ಮುಂದಿನ ವರ್ಷ ಏಪ್ರಿಲ್ ನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆ ಪೀಠ ಸೂಚಿಸಿದೆ.
Advertisement