ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ ಪುತ್ರನ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಕಾಂಗ್ರೆಸ್ ನಾಯಕ ಕಾರ್ತಿ ಪಿ ಚಿದಂಬರಂ ಅವರ ಕೆಲವು ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ದಾಳಿ ನಡೆಸಿವೆ ಎಂದು ಆದಾಯ ತೆರಿಗೆ
ಪಿ ಚಿದಂಬರಂ ಮತ್ತು ಪುತ್ರ ಕಾರ್ತಿ ಪಿ ಚಿದಂಬರಂ
ಪಿ ಚಿದಂಬರಂ ಮತ್ತು ಪುತ್ರ ಕಾರ್ತಿ ಪಿ ಚಿದಂಬರಂ

ನವದೆಹಲಿ: ಕಾಂಗ್ರೆಸ್ ನಾಯಕ ಕಾರ್ತಿ ಪಿ ಚಿದಂಬರಂ ಅವರ ಕೆಲವು ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿವೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ್ರನ ವ್ಯವಹಾರ ಸಂಸ್ಥೆಗಳ ಮೇಲೆ ದಾಳಿ ಮಾಡಲಾಗಿದೆ.

ಕಾರ್ತಿ ಅವರಿಗೆ ಸಂಬಂಧಿಸಿದ ವಾಸನ್ ಐ ಕೇರ್ ಮತ್ತು ಅಡ್ವಾಂಟೇಜ್ ಸ್ಟ್ರ್ಯಾಟಜಿಕ್ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ. ೨ಜಿ ಹಗರಣದ ಒಂದು ಪ್ರಕರಣವಾಗಿರುವ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣವನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಈ ಪ್ರಕರಣದ ತನಿಖೆ ಸುಪ್ರೀಮ್ ಕೋರ್ಟ್ ಕಣ್ಗಾವಲಿನಲ್ಲಿ ನಡೆಯುತ್ತಿದ್ದು ತನಿಖೆ ಮುಗಿಯುವವರೆಗೆ ಜಾರಿ ನಿರ್ದೇಶನಾಲಯಕ್ಕೆ ರಾಜೇಶ್ವರ್ ಸಿಂಗ್ ಅವರನ್ನು ಸಹ ನಿರ್ದೇಶಕನಾಗಿ ನೇಮಕ ಮಾಡಿತ್ತು.

ಈ ತನಿಖೆಯ ಭಾಗವಾಗಿ ಸಿಬಿಐ ಈಗಾಗಲೇ ಕಾರ್ತಿ ಅವರ ಹೇಳಿಕೆಯನ್ನು ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com