ಪ್ರಗತಿಪರ ರೈತ ಪುಟ್ಟಯ್ಯರಿಂದ ದಸರಾ ಉದ್ಘಾಟನೆ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಪ್ರಗತಿಪರ ರೈತ ಪುಟ್ಟಯ್ಯ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ.
ಪುಟ್ಟಯ್ಯ
ಪುಟ್ಟಯ್ಯ
Updated on: 

ಮೈಸೂರು: ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಪ್ರಗತಿಪರ ರೈತ ಪುಟ್ಟಯ್ಯ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 13ರಂದು ಪುಟ್ಟಯ್ಯ ಅವರು ನಾಡಹಬ್ಬ ದಸರಾಗೆ ಚಾಲನೆ ನೀಡಲಿದ್ದು, 22ರಂದು ವಿಜಯದಶಮಿ ಆಚರಿಸಲಾಗುವುದು ಎಂದು ಸಚಿವ ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀನಿವಾಸ್ ಪ್ರಸಾದ್ ಅವರು, ಮೈಸೂರು ದಸರಾದ ದಿನಾಂಕ ಬದಲಾವಣೆ ಮಾಡಲಾಗಿದ್ದು, ಅ.13ರಂದು ಪುಟ್ಟಯ್ಯ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಮತ್ತು 22ರಂದು ಜಂಬೂ ಸವಾರಿಯೊಂದಿಗೆ ದಸರಾ ಮುಕ್ತಾಯವಾಗಲಿದೆ ಎಂದರು. ಈ ಹಿಂದೆ ಅ.13ರಿಂದ 23ರವರೆಗೆ ದಸರಾ ಕಾರ್ಯಕ್ರಮ ಎಂದು ನಿಗದಿಯಾಗಿತ್ತು ಎಂದು ಸಚಿವರು ವಿವರಿಸಿದರು.

ಈ ಮೊದಲು ಪ್ರಗತಿಪರ ರೈತ ಕಡಿದಾಳ್ ಶ್ಯಾಮಣ್ಣ ಅವರಲ್ಲಿ ಮೈಸೂರು ದಸರಾ ಉದ್ಘಾಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದರು. ಆದರೆ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ, ರಾಜ್ಯ, ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ತಾನು ಮೈಸೂರು ದಸರಾ ಉದ್ಘಾಟಿಸಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com