ಆಸಿಡ್ ದಾಳಿಗೆ ಒಳಗಾದವರ ಚಿಕಿತ್ಸೆಗೆ ಸರ್ಕಾರದಿಂದ ರು.20 ಲಕ್ಷ ಪರಿಹಾರ

ಆಸಿಡ್ ದಾಳಿ ಹಾಗೂ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆಯಿಂದ ಗಾಯಗೊಂಡವರ ಚಿಕಿತ್ಸೆಗೆ 20 ಲಕ್ಷ ರುಪಾಯಿವರೆಗೆ...
ಉಮಾಶ್ರೀ
ಉಮಾಶ್ರೀ

ಬೆಂಗಳೂರು: ಆಸಿಡ್ ದಾಳಿ ಹಾಗೂ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆಯಿಂದ ಗಾಯಗೊಂಡವರ ಚಿಕಿತ್ಸೆಗೆ 20 ಲಕ್ಷ ರುಪಾಯಿವರೆಗೆ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರದ ಘೋಷಿಸಿದೆ.

ಈ ಸಂಬಂಧ ಐದು ದಿನಗಳ ಹಿಂದೆಯೇ ಸರ್ಕಾರ ಆದೇಶ ಹೊರಡಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ಹೇಳಿದ್ದಾರೆ.

ಆಸಿಡ್ ದಾಳಿಗೆ ಒಳಗಾಗುವವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಬದ್ಧವಾಗಿದ್ದು, ಆಸಿಡ್ ಮತ್ತು ಸೀಮೆ ಎಣ್ಣೆ ದಾಳಿಯಲ್ಲಿ ಶೇ.50ರಷ್ಟು ಸುಟ್ಟ ಗಾಯಗಳಾಗಿದ್ದರೆ, ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಬಹುದು ಎಂದಿದ್ದಾರೆ. ಅಲ್ಲದೆ ತಿಂಗಳಿಗೆ 3 ಸಾವಿರ ರುಪಾಯಿ ಮಾಸಿಕ ಪಿಂಚಣಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಈ ಮುಂಚೆ ಆಸಿಡ್ ದಾಳಿಯಲ್ಲಿ ಗಾಯಗೊಂಡವರಿಗೆ ಸರ್ಕಾರ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಅದನ್ನು ಖಾಸಗಿ ಆಸ್ಪತ್ರೆಗೂ ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com