

ಪಾಟ್ನಾ: ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದರೆ, ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧಿಸುತ್ತೇವೆ ಎಂದು ಬಿಜೆಪಿ ಪಕ್ಷದ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ ಸೋಮವಾರ ಹೇಳಿದ್ದಾರೆ.
"ಬಿಜೆಪಿ ನಾಯಕತ್ವದ ಎನ್ ಡಿ ಎ ಸರ್ಕಾರ ರಚಿಸಿದರೆ ನಾವು ಗೋಹತ್ಯೆ ನಿಷೇಧಿಸುತ್ತೇವೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಹಸುಗಳ ಕಳ್ಳಸಾಗಾಣಿಕೆಯನ್ನು ತಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಾವಿರಾರು ಗೋವುಗಳ ಪ್ರಾಣವನ್ನು ಪ್ರಧಾನಿ ನರೇಂದ್ರ ಮೋದಿ ರಕ್ಷಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
"ಹಸುಗಳಿಗೆ ರಕ್ಷಣೆ ನೀಡಿ ಗೋ-ಪಾಲಕರ ಜೀವನದ ಕಲ್ಯಾಣದ ಬಗ್ಗೆ ಬಿಜೆಪಿ ಆಸ್ತೆ ವಹಿಸುತ್ತದೆ" ಎಂದು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.