
ನವದೆಹಲಿ: ಕೇಂದ್ರ ಸರ್ಕಾರ ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಲು ವಿಫಲವಾಗಿದೆ ಎಂದು ದೂರಿ ಹಿರಿಯ ಬರಹಗಾರ್ತಿ, ಜವಾಹರ್ ಲಾಲ್ ನೆಹರು ಅವರ ಸೋದರ ಸೊಸೆ ನಯನತಾರ ಸೈಗಲ್ ಅವರು ಪ್ರಖ್ಯಾತ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಲು ಮುಂದಾಗಿದ್ದಾರೆ.
೮೮ ವರ್ಷದ ಸೈಗಲ್ ಅವರು ೧೯೮೬ರಲ್ಲಿ ಈ ಪ್ರಶಸ್ತಿ ಪಡೆದಿದ್ದರು.
ಅವರು ತಮ್ಮ ಇತ್ತೀಚಿನ ಪುಸ್ತಕದಲ್ಲಿ, ಹಿಂದುತ್ವ ಸಿದ್ಧಾಂತವನ್ನು ವಿರೋಧಿಸಿದವರಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡಲು ವಿಫಲವಾಗಿದೆ ಎಂದು ದೂರಿದ್ದರು ಹಾಗು ವಿರೋಧಿಸುವುದು ಭಾರತೀಯ ಸಂವಿಧಾನದ ಮೂಲ ಹಕ್ಕುಗಳಲ್ಲಿ ಒಂದು ಎಂದಿರುವ ಅವರು ಭಾರತದ ಸಾಂಸ್ಕೃತಿಕ ವೈವಿಧ್ಯತೆ ಆತಂಕದಲ್ಲಿದೆ ಎಂದಿದ್ದಾರೆ.
ಇತ್ತೀಚೆಗಷ್ಟೇ ಕನ್ನಡ ಸಂಶೋಧಕ ಎಂ ಎಂ ಕಲ್ಬುರ್ಗಿ ಅವರ ಹತ್ಯೆಯನ್ನು ವಿರೋಧಿಸಿ ಹಿಂದಿ ಲೇಖಕ ಉದಯ್ ಪ್ರಕಾಶ್ ಅವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದನ್ನು ನೆನಪಿಸಿಕೊಳ್ಳಬಹುದು.
Advertisement