ರಾಹುಲ್ ಗಾಂಧಿ ರ್ಯಾಲಿಗಾಗಿ ಬಡ ರೈತನ ಬೆಳೆ ನಾಶ..!

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರ್ಯಾಲಿಗೆ ಓರ್ವ ಬಡ ರೈತನ ಬೆಳ ನಾಶವಾಗಿದೆ ಎಂದು ತಿಳಿದುಬಂದಿದೆ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)

ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರ್ಯಾಲಿಗೆ ಓರ್ವ ರೈತನ ಬೆಳ ನಾಶವಾಗಿದೆ ಎಂದು ತಿಳಿದುಬಂದಿದೆ.

ಖಾಸಗಿ ಸುದ್ದಿವಾಹಿನಿ ವರದಿ ಮಾಡಿರುವಂತೆ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿರುವ ರ್ಯಾಲಿಗಾಗಿ ಸುಮಾರು 3 ಫುಟ್ ಬಾಲ್ ಕ್ರೀಡಾಂಗಣದಷ್ಟು ಬೆಳೆಯನ್ನು  ನಾಶಮಾಡಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕದ ರಾಣೆಬೆನ್ನೂರಿನ ಓರ್ವ ರೈತನಿಗೆ ಸೇರಿದೆ ಸುಮಾರು 4 ಎಕರೆ ಜಮೀನಿನಲ್ಲಿ ಬೆಳಯಲಾಗಿದ್ದ ಮೆಕ್ಕೆಜೋಳವನ್ನು  ನಾಶಪಡಿಸಲಾಗಿದೆ. ಇನ್ನು 15 ಬಳಿಕ ಈ ಬೆಳೆಯನ್ನು ಕಟಾವು ಮಾಡಬೇಕಿತ್ತು. ಆದರೆ ರಾಹುಲ್ ಗಾಂಧಿ ಅವರ ಆಗಮನದ ಹಿನ್ನಲೆಯಲ್ಲಿ ಅವಧಿಗೂ ಮುನ್ನವೇ ಬೆಳೆಯನ್ನು ತೆಗೆದು ಹಾಕಿ  ರಾಹುಲ್ ಗಾಂಧಿ ಅವರ ರ್ಯಾಲಿಗೆ ವೇದಿಕೆ ನಿರ್ಮಾಣ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಖ್ಯಾತ ಇತಿಹಾಸ ತಜ್ಞ ಮತ್ತು ಲೇಖಕ ರಾಮಚಂದ್ರ ಗುಹಾ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಈ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ಈ ವಿಚಾರ  ಇದೀಗ ವಿವಾದಕ್ಕೆ ಕಾರಣವಾಗಿದ್ದು, ರ್ಯಾಲಿ ಆಯೋಜಕರ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕದಲ್ಲಿ ಇತ್ತೀಚೆಗೆ ಆತ್ಮಹತ್ಯೆಗೀಡಾದ ರೈತ ಕುಟುಂಬಕ್ಕೆ ಸಾಂತ್ವನ ಹೇಳುವ ಸಲುವಾಗಿ ಇದೇ ಅಕ್ಟೋಬರ್ 9 ಮತ್ತು 10 ರಂದು ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ  ಆಗಮಿಸಲಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜಿಲ್ಲೆಗೆ ಆಗಮಿಸುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಭರದ ಸಿದ್ಧತೆ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಅವರು ರಾಜ್ಯಕ್ಕೆ  ಭೇಟಿ ನೀಡಲಿರುವ ಹಿನ್ನಲೆಯಲ್ಲಿ ರಾಜ್ಯದ ಪ್ರಮುಖ ನಾಯಕರು ಮತ್ತು ಅವರ ಬೆಂಬಲಿಗರು ರಾಣೆ ಬೆನ್ನೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ಅವರೆಲ್ಲರಿಗೂ ಮತ್ತು ಅವರ ವಾಹನಗಳಿಗೆ  ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com