
ಬೆಂಗಳೂರು: ಕಾಲ್‌ಸೆಂಟರ್ ಉದ್ಯೋಗಿ ಮೇಲೆ ಟಿಟಿ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳನ್ನು ಅಕ್ಟೋಬರ್ 20ರವರೆಗೆ 3ನೇ ಎಸಿಎಂಎಂ ಕೋರ್ಟ್ ಪೊಲೀಸ್ ವಶಕ್ಕೆ ನೀಡಿದೆ.
ಆರೋಪಿಗಳಾದ ಸುನೀಲ್ ಹಾಗೂ ಯೋಗೇಶ್‌ನನ್ನು ಇಂದು ಬೆಳಗ್ಗೆ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕ ಪೊಲೀಸರು ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಮೋಹನ್ ಪ್ರಭು ಅವರು, ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಮಧ್ಯಪ್ರದೇಶ ಮೂಲದ 22 ವಷದ ಬಿಪಿಒ ಉದ್ಯೋಗಿಯನ್ನು ಡ್ರಾಪ್ ಕೊಡುವ ನೆಪದಲ್ಲಿ ಟೆಂಪೋ ಟ್ರಾವೆಲರ್ ಗೆ ಹತ್ತಿಸಿಕೊಂಡು ಈ ಇಬ್ಬರು ಕಾಮುಕರು ಸತತ ನಾಲ್ಕು ಗಂಟೆಗಳ ಕಾಲ ಚಲಿಸುವ ವಾಹನದಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದರು.
ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದ ಸುನೀಲ್(23) ಹಾಗೂ ಲಕ್ಯಾ ಹೋಬಳಿ ಸಿಂದಗೇರಿ ಗ್ರಾಮದ ಯೋಗೇಶ್(27) ಎಂಬುವವರನ್ನು ನಿನ್ನೆ ಬಂಧಿಸಿದ್ದರು.
Advertisement