ಪ್ರಧಾನ ಸುದ್ದಿ

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಡಿಸ್ಚಾರ್ಜ್

ಲಘು ಹೃದಯಾಘಾತದಿಂದ ಮಂಗಳವಾರ ವಿಠಲ್ ಮಲ್ಯ ರಸ್ತೆಯಲ್ಲಿರುವ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಅವರು ಸಂಪೂರ್ಣ...

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಡಿಸ್ಚಾರ್ಜ್
ಶಿವರಾಜ್‌ಕುಮಾರ್
Published On :

ಬೆಂಗಳೂರು: ಲಘು ಹೃದಯಾಘಾತದಿಂದ ಮಂಗಳವಾರ ವಿಠಲ್ ಮಲ್ಯ ರಸ್ತೆಯಲ್ಲಿರುವ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಅವರು ಸಂಪೂರ್ಣ ಗುಣಮುಖರಾಗಿದ್ದು, ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.

ಡಿಸ್ಚಾರ್ಜ್ ಆದ ಬಳಿಕ ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ, ಜಿಮ್ ಮಾಡಬೇಕಾದರೆ ಎದೆ ನೋವು ಕಾಣಿಸಿಕೊಂಡಿತು. ಪತ್ನಿ ಗೀತಾಗೆ ವಿಷಯ ತಿಳಿಸಿದೆ. ನಂತರ ಆಸ್ಪತ್ರೆಗೆ ದಾಖಲಾದೆ. ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದರು. ಅಲ್ಲದೆ ಕೆಲಸದ ಒತ್ತಡದಿಂದ ಈ ರೀತಿ ಆಗಿದೆ ಎಂದರು.

ಮಗಳ ಮದುವೆ ಹಾಗೂ ಸಿನಿಮಾ ಚಿತ್ರೀಕರಣದಿಂದಾಗಿ ಸ್ವಲ್ಪ ಒತ್ತಡವಿತ್ತು. ಆದರೂ ಶಿವಣ್ಣನ ಎನರ್ಜಿ ಕಡಿಮೆ ಆಗಲ್ಲ ಎಂದು ಸೆಂಚುರಿಸ ಸ್ಟಾರ್ ಹೇಳಿದರು.

ಚಿಕಿತ್ಸೆ ನೀಡಿದ ಎಲ್ಲಾ ವೈದ್ಯರಿಗೂ ಧನ್ಯವಾದ ಹೇಳಿದ ಶಿವಣ್ಣ, ಅಭಿಮಾನಿಗಳ ಪ್ರೀತಿ ವಿಶ್ವಾಸ ಸದಾ ಹೀಗೆ ಇರಲಿ ಎಂದರು.

ಆಸ್ಪತ್ರೆ ಬಳಿ ನೆರೆದಿದ್ದ ನೂರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮೇಲೆ ಹೂವಿನ ಮಳೆಯೇ ಸುರಿಸಿ, ಸಂಭ್ರಮಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.