

ಮಂಡ್ಯ: ರೈತರ ಆತ್ಮಹತ್ಯೆ ಅತಿ ಸೂಕ್ಷ್ಮ ವಿಚಾರವಾಗಿದ್ದು, ರಾಜ್ಯದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಮಂಡ್ಯದ ವಿ.ಸಿ.ಫಾರ್ರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ರಾಜ್ಯದಲ್ಲಿ ಹಲವು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತರ ಆತ್ಮಹತ್ಯೆ ಅತೀ ಸೂಕ್ಷ್ಮ ವಿಚಾರವಾಗಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುವುದು ಸರಿಯಲ್ಲ ಎಂದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿದ ಎಐಸಿಸಿ ಉಪಾಧ್ಯಕ್ಷ, ಪ್ರಧಾನಿಯವರು ಹಲವು ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ರೈತರ ಕಷ್ಟಗಳಿಗೆ ಸ್ಪಂದಿಸುವುದಿಲ್ಲ ಎಂದರು.
ಪ್ರತಿ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಕೋಮು ಗಲಭೆಯನ್ನು ಸೃಷ್ಠಿಸುತ್ತದೆ. ಇದಕ್ಕೆ ಉತ್ತರ ಪ್ರದೇಶದ ದಾದ್ರಿ ಹತ್ಯೆ ಪ್ರಕರಣ ತಾಜಾ ಉದಾಹರಣೆ ಎಂದರು.