ಹಾವೇರಿ: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮೈದೂರಿಗೆ ಭೇಟಿ ನೀಡಿದ್ದಾರೆ.
ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದ ಮೈದೂರಿನ ರೈತ ಅಶೋಕ್ ಅವರ ನಿವಾಸಕ್ಕೆ ಇಂದು ರಾಹುಲ್ ಗಾಂಧಿ ಭೇಟಿ ನೀಡಿ, ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅಲ್ಲದೆ ಕೆಪಿಸಿಸಿ ವತಿಯಿಂದ 1 ಲಕ್ಷ ರುಪಾಯಿ ಪರಿಹಾರದ ಚೆಕ್ನ್ನು ನೀಡಿದರು.
ಇನ್ನು ಈ ವೇಳೆ ಉಪಸ್ಥಿತಿರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ, ಮೃತ ಅಶೋಕ್ ಅವರ ಪುತ್ರ ಕಿರಣ್ಗೆ ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿದರು.
ಈಗ ಮೃತ ರೈತ ಅಶೋಕ್ ಅವರ ನಿವಾಸದಿಂದ ಗುಡುಗೂರುವರೆಗೆ ರಾಹುಲ್ ಗಾಂಧಿ ಪಾತ್ರೆಯಾತ್ರೆ ಆರಂಭಿಸಿದ್ದು, ಅವರಿಗೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸಾಥ್ ನೀಡಿದ್ದಾರೆ.
ಪಾದಯಾತ್ರೆಯ ಬಳಿಕ ಗುಡುಗೂರಿನಲ್ಲಿ ರೈತರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ರೈತರಿಗೆ ವಿಶೇಷ ಪ್ಯಾಕೇಜ್ ಪ್ರಕಟಿಸುವ ಸಾಧ್ಯತೆ ಇದೆ.